Breaking News

ರೈತರೇ ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ: ಡಿಕೆ ಶಿವಕುಮಾರ್

Spread the love

ಬೆಂಗಳೂರು: ಕಾಂಗ್ರೆಸ್ ಶಾಸಕರು ನಿಮ್ಮ ಸರ್ಕಾರ ತೆಗೆಯುವುದಿಲ್ಲ. ರೈತರೇ ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೈ ನಾಯಕರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಸಿರು ಶಾಲು ಹಾಕಿಕೊಂಡು ರೈತರ ಪರವಾಗಿ ಇದ್ದೇನೆ ಎಂದು ಬೂಟಾಟಿಕೆ ಮಾಡ್ತಾರೆ. ಆದರೆ ರಾಜ್ಯದ ರೈತರು ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ. ಈ ಕಾನೂನು ಹಿಂಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಗುಡುಗಿದರು.ಈಗಾಗಲೇ ಆನೇಕಲ್ ಮತ್ತು ಕನಕಪುರ ಭಾಗದ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ. ಬಹುರಾಷ್ಟ್ರೀಯ ಕಂಪನಿಗಳು ಬೀಜ ಕೊಟ್ಟು ಬೆಲೆ ಬಳಿಕ ಕ್ವಾಲಿಟಿ ಸರಿಯಿಲ್ಲ ಅಂತ ಹೇಳಿದ್ದವು. ರೈತನ ರಕ್ಷಣೆ ನಮ್ಮ ಹೊಣೆ. ಹೀಗಾಗಿ ಪ್ರತಿಭಟನೆಗೆ ಕರೆ ನೀಡಿದ್ದು, ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲರಿಗೂ ವಂದನೆಗಳು ಎಂದು ತಿಳಿಸಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ