Home / ಜಿಲ್ಲೆ / ಬೆಳಗಾವಿ / ಬೆಳಗಾವಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಣೆ

ಬೆಳಗಾವಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಣೆ

Spread the love

ಬೆಳಗಾವಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆವರಣೆ ಮಾಡಲಾಯಿತು.

ಹೌದು ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ, ಮಹಾನಗರ ಪಾಲಿಕೆ ಬೆಳಗಾವಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಂದು ರವಿವಾರ ಅತ್ಯಂತ ಅದ್ಧೂರಿಯಾಗಿ ಮಹರ್ಷಿ ಮಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ವೇಳೆ ಮಹರ್ಷಿ ವಾಲ್ಮೀಕಿರವರ ಭಾವಚಿತ್ರದ ಅದ್ದೂರಿ ಶೋಭಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಶೋಭಾಯಾತ್ರೆಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಅಪರ ಜಿಲ್ಲಾಧಿಕಾರಿಗಳಾದ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿದ್ಯಾವತಿ ಭಜಂತ್ರಿ ಮೊದಲಾದ ಗಣ್ಯರು ಪೂಜೆಯನ್ನು ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಕೋಟೆ ಕೆರೆಯಿಂದ ಪ್ರಾರಂಭವಾಗಿ ಶೋಭಾಯಾತ್ರೆ ಕುಮಾರ ಗಂಧರ್ವ ರಂಗ ಮಂದಿರದ ವರೆಗೆ ಸಾಗಿ ಮುಕ್ತಾಯಗೊಂಡಿತು. ಈ ವೇಳೆ ಮೆರವಣಿಗೆಯುದ್ದಕ್ಕೂ ವಿವಿಧ ಮಂಗಳವಾದ್ಯಗಳು ಮೊಳಗಿದವು.


Spread the love

About Laxminews 24x7

Check Also

ಕರಂಜಾಳ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು

Spread the loveಖಾನಾಪುರ: ಸಾಮಾನ್ಯವಾಗಿ ಬೇಸಿಗೆಯಲ್ಲಿ ಹಳ್ಳ-ಕೊಳ್ಳಗಳು, ಕೆರೆ-ಕಟ್ಟೆಗಳು ಮತ್ತು ನದಿ ಮತ್ತಿತರ ಜಲಮೂಲಗಳಲ್ಲಿ ನೀರಿನ ಹರಿವು ಮತ್ತು ಪ್ರಮಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ