Breaking News

ರಾಮದುರ್ಗದಲ್ಲಿ ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತ

Spread the love

ಬೆಳಗಾವಿ : ಬೈಕ್ ಪಕ್ಕಕ್ಕೆ ಇಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತವಾಗಿದ್ದು, ಓರ್ವನ ಮೇಲೆ ಹಲ್ಲೆ ಮಾಡಿರುವ ರಾಮದುರ್ಗ ಪಟ್ಟಣದಲ್ಲಿ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ್ ಬಂಡಿವಡ್ಡರ್‌ಗೆ ಚಾಕು ಇರಿತವಾಗಿದ್ದು, ರವಿ ಬಂಡಿವಡ್ಡರ್ ಎಂಬ ಯುವಕನ ತಲೆಗೆ ರಾಡ್ ನಿಂದ ಹಲ್ಲೆ ಮಾಡಲಾಗಿದೆ. ಇತ್ತ ಜಗಳ ಬಿಡಿಸಲು ಹೋದ ನಂಜುಂಡಿ ಸಾಬಣ್ಣ ಬಂಡಿವಡ್ಡರ್ ಎಂಬುವವರ ಮೇಲೆಯೂ ಹಲ್ಲೆಯಾಗಿದೆ. ಅವರನ್ನು ರಾಮದುರ್ಗ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪ್ರಕರಣ ಹಿನ್ನೆಲೆ: ಬೈಕ್ ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಒಂದು ಕೋಮಿನ ಐದಕ್ಕೂ ಅಧಿಕ ಯುವಕರಿಂದ ಚಾಕು, ರಾಡ್, ಕಲ್ಲಿನಿಂದ ಹಲ್ಲೆ ಮಾಡಲಾಗಿದೆ. ಅಮೀನ್ ಜಂಗಲಶೇಖ್ ಮತ್ತು ಸಹಚರರಿಂದ ಹಲ್ಲೆ ಆರೋಪವಿದ್ದು ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದೆ. ಆಸ್ಪತ್ರೆ ಬಳಿ ಸಂಬಂಧಿಕರು ಜಮಾವಣೆ ಆಗುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ವಹಿಸಿದ್ದಾರೆ.


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ