Breaking News

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ

Spread the love

ನಾಟಕಕಾರ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್​​ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಬಗ್ಗೆ ‘ಮಾತನಾಡಿರುವ ಲೋಹಿತಾಶ್ವ ಅವರ ಪುತ್ರ ಶರತ್ ಲೋಹಿತಾಶ್ವ, ತಂದೆಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಕೂಡ ತಂದೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆಗೆ ತಂದೆಯವರು ಯಾವ ರೀತಿ ಸ್ಪಂದನೆ ಮಾಡ್ತಾರೆ ಅನ್ನೋದು ಗೊತ್ತಾಗಬೇಕಿದೆ‌ ಎಂದು ತಿಳಿಸಿದ್ದಾರೆ‌.ಇನ್ನು, ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಹಾಗೂ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ‌.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ