Breaking News

ಸಂಕೇಶ್ವರ: ಮೂರು ಕಾರು-ದ್ವಿಚಕ್ರ ವಾಹನ ನಡುವೆ ಸರಣಿ ಅಪಘಾತ, ತಾಯಿ ಮಗು ಸಾವು, ಹಲವರಿಗೆ ಗಾಯ

Spread the love

ಸಂಕೇಶ್ವರ : ಮೂರು ಕಾರುಗಳು ಹಾಗೂ ಒಂದು ದ್ವಿಚಕ್ರ ವಾಹನ ನಡುವೆ ನಡೆದ ಸರಣಿ ಅಪಘಾತದಲ್ಲಿ ತಾಯಿ ಹಾಗೂ ಮಗು ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಹತ್ತಿರ ರವಿವಾರ ರಾತ್ರಿ 8 ಗಂಟೆಯ ಸುಮಾರಿಗೆ ನಡಿದಿದೆ.‌

ಈ ಘಟನೆಯಲ್ಲಿ ಮೃತಪಟ್ಟವರನ್ನು ಬೈಲಹೊಂಗಲ ತಾಲೂಕಿನ ಬಾರತಿ (28) ಹಾಗೂ ವೇದಾಂತ ಪೂಜೇರಿ (6) ಇವರಿಬ್ಬರು ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಇವರು ದ್ವಿಚಕ್ರ ವಾಹನ ಮೇಲೆ ಸಂಚರಿಸುತ್ತಿದ್ದರು ಎನ್ನಲಾಗಿದೆ.

ಇದರಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೆ ಮೂರು ಕಾರುಗಳ ವಾಹನ ಚಾಲಕರಿಗೆ ತೀವ್ರ ಗಾಯವಾಗಿದ್ದು, ಅವರನ್ನು ಕೂಡಾ ಆಸ್ಪತ್ರೆ ದಾಖಲಿಸಲಾಗಿದೆ.

ಎರಡು ಕಾರು ಘಟಪ್ರಭಾದಿಂದ ಹುಕ್ಕೇರಿ ಕಡೆ ಬರುತ್ತಿದ್ದವು ಒಂದು ಕಾರು ಗೋಕಾಕದಿಂದ ಹುಕ್ಕೇರಿ ಕಡೆ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹುಕ್ಕೇರಿ ಸಿಪಿಐ ರಫೀಕ್ ತಹಶಿಲ್ದಾರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹುಕ್ಕೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ