Breaking News

ಪ್ರತಿ ಟನ್ ಕಬ್ಬಿಗೆ 5500 ಬೆಲೆ ಘೋಷಣೆ ಮಾಡುವಂತೆ ರೈತ ಸಂಘದಿoದ ಪ್ರತಿಭಟನೆ

Spread the love

ಪ್ರಸಕ್ತ ಸಾಲಿನಲ್ಲಿ ಕನ್ನು ಬೆಳೆದ ರೈತರಿಗೆ ಪ್ರತೀ ಟನ್ ಕಬ್ಬಿಗೆ 5500 ರೂ ನಿಗದಿ ಮಾಡುವಂತೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳಿAದ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸುರಿಯುವ ಮಳೆಯನ್ನೂ ಲೆಕ್ಕಿಸದೇ ರೈತರು ನಗರದ ಚೆನ್ನಮ್ಮಾ ವೃತ್ತದಲ್ಲಿ ರಸ್ತೆ ತಡೆಯನ್ನು ನಡೆಸಿ ಸರಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದರು.

 

ಪ್ರಸಕ್ತ ಸಾಲಿನಲ್ಲಿ ರೈತರು ಬೆಳೆದ ಕಬ್ಬಿಗೆ ಪ್ರತೀ ಟನ್‌ಗೆ 5500ರೂ ನೀಡುವಂತೆ ಆಗ್ರಹಿಸಿ ಇಂದು ಸೋಮವಾರ ಬೆಳಗಾವಿಯಲ್ಲಿ ವಿವಿಧ ರೈತಪರ ಸಂಘಟನೆಗಳಿAದ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರು ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ ಬೀದಿಗಿಳಿದ ರೈತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ನಗರದ ಅಶೋಕ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ತಮನೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವಬನ್ನು ಹೊರಹಾಕಿದರು. ಈ ವೇಳೆ ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಸೇರಿ ಹತ್ತಾರು ಮುಖಂಡರು ಪ್ರತಿಭಟನೆಯ ಮುಂದಾಳತ್ವವನ್ನು ವಹಿಸಿದ್ದರು.

 

 

ಕಳೆದ ಒಂದು ದಶಕದಿಂದ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರಿಂದ ಮೋಸವಾಗುತ್ತಿದೆ. ಕಬ್ಬು ಬೆಳೆದ ರೈತರಿಗೆ ಸೂಕ್ತ ದರ ನೀಡುತ್ತಿಲ್ಲ. ಹಾಗಾಗಿ ಪ್ರತಿ ಟನ್ ಕಬ್ಬಿಗೆ 5500 ರುಪಾಯಿ ದರ ನೀಡಬೇಕು. ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುವ ವರೆಗೂ ಹೋರಾಟ ಮಾಡುವ ಎಚ್ಚರಿಕೆ ನೀಡಿರ ರೈತ ಮುಖಂಡರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಪೊಲೀಸ್ ಹಾಗೂ ರೈತ ಮುಖಂಡರ ಮಧ್ಯೆ ಕೆಲಕಾಲ ವಾಗ್ವಾದ ನಡೆಯಿತು.

ಈ ವೇಳೆ ಪ್ರತಿಭಟನಾ ರ‍್ಯಾಲಿ ಮೂಲಕ ನಗರದ ಚೆನ್ನಮ್ಮಾ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರ ರೈತರು, ರಸ್ತೆ ತಡೆಯನ್ನು ನಡೆಸಿದರು. ರಸ್ತೆಯ ಮಧ್ಯವೇ ಮಲಗಿ, ಹಸಿರು ಶಾಲನ್ನು ತಿರುವುತ್ತ ಶಿರಶಾಸನವನ್ನು ಮಾಡಿ ನಸರಕಾರಕ್ಕೆ ನ್ಯಾಯಕ್ಕಾಗಿ ಆಗ್ರಹಿಸಿದರು.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ