Breaking News

ಎಟಿಎಂ ಎಕ್ಸಚೆಂಜ್ ಮಾಡಿ ಹಣ ಕದ್ದಿದ್ದ ಆರೋಪಿ ಅಂದರ್

Spread the love

ಎಟಿಎಂಗೆ ಹೋದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪಾಸವರ್ಡ ತಿಳಿದುಕೊಂಡು 37,500 ರೂಪಾಯಿ ಹಣ ದೋಚಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ್ ಮಾಹಿತಿ ನೀಡಿದ್ದಾರೆ.

ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಚಿಕ್ಕೋಡಿ ತಾಲೂಕಿನ ಹಾಲಟ್ಟಿ ಗ್ರಾಮದ ವಿಜಯಾ ರಾನಪ್ಪ ಎಂಬ ಮಹಿಳೆ ಅ.3ರಂದು ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಹೋದಾಗ, ಯಾವುದೋ ಒಬ್ಬ ವ್ಯಕ್ತಿ ಸಹಾಯ ಮಾಡುವ ನೆಪದಲ್ಲಿ ಪಾಸವರ್ಡ ತಿಳಿದುಕೊಂಡು ಕಾರ್ಡ ಎಕ್ಸಚೆಂಜ್ ಮಾಡಿ ಇವರ ಅಕೌಂಟ್‍ದಿಂದ 37.500 ರೂ. ಹಣ ವಿತ್ ಡ್ರಾ ಮಾಡಿಕೊಂಡ ಬಗ್ಗೆ ದೂರು ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಆರೋಪಿತನಾದ ಅಮೂಲ್ ದಿನೇಶ ಸಖಟೆ(30) ಬಂಧಿಸಿ ಈತನಿಂದ ಬೇರೆ ಬೇರೆ ಜನರಿಗೆ ಮೋಸ ಮಾಡಿದ ವಿವಿಧ ಬ್ಯಾಂಕಗಳ ಒಟ್ಟು 51 ಎಟಿಎಮ್ ಕಾರ್ಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿತನು ಅಥಣಿ, ಗೋಕಾಕ, ನಿಪ್ಪಾಣಿ, ಚಿಕ್ಕೋಡಿ, ಬಾಗಲಕೋಟ ಹಾಗೂ ಮಹಾರಾಷ್ಟ್ರ ರಾಜ್ಯದ ಹಲವು ಕಡೆಗಳಲ್ಲಿ ಇದೇ ರೀತಿ ಅಪರಾಧ ಎಸಗಿದ ಬಗ್ಗೆ ಕಂಡು ಬಂದಿದ್ದು ತನಿಖೆ ಮುಂದುವರಿಸಲಾಗಿದೆ ಎಂದರು.

ಒಟ್ಟಿನಲ್ಲಿ ಎಟಿಎಂನಲ್ಲಿ ಹಣ ತೆಗೆದುಕೊಳ್ಳುವಾಗ ಮಹಿಳೆಯರು, ವೃದ್ಧರು ಸೇರಿ ಎಲ್ಲರೂ ಎಚ್ಚರವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ