ಚಿತ್ರದುರ್ಗ : ನಾನೂ ಈ ಬಾರಿ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಟಿಕೆಟ್ ಕೇಳುತ್ತೇನೆ ಎಂದು ಕನ್ನಡದ ಖ್ಯಾತ ನಟಿ ಭಾವನಾ ( Bhavana ) ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ( Bharath Jodo yathra) ಮಾತನಾಡಿದ್ದ ನಟಿ ಭಾವನಾ ಜನರ ಸೇವೆ ಮಾಡಲು ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ಲುತ್ತೀನಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಪ್ರಧಾನಿ ಮೋದಿಗೆ ಅವರಿಗೆ ರಾಹುಲ್‌ಗಾಂಧಿ Gandhi) ಸಮನಾದ ವ್ಯಕ್ತಿ ಎಂದು ಹೇಳಿದ್ದಾರೆ.
ರಾಹುಲ್‌ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದು, ಕರ್ನಾಟಕದ ಹಲವು ಕಡೆ ಯಾತ್ರೆ ನಡೆಸಿದೆ. ರಾಜ್ಯದಲ್ಲೂ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 14ರ ವರೆಗೆ ರಾಹುಲ್ ಗಾಂಧಿ ಅವರು ಪಾದಯಾತ್ರೆ ನಡೆಸುತ್ತಿದ್ದಾರೆ. ಇಂದು ರಾಹುಲ್ ಗಾಂಧಿ 10ನೇ ದಿನದ ಪಾದಯಾತ್ರೆ ಚಿತ್ರದುರ್ಗದ ಹರ್ತಿಕೋಟೆಯಿಂದ ಆರಂಭವಾಗುತ್ತಿದ್ದು, 22 ಕಿಮೀ ಪಾದಯಾತ್ರೆ ಮಾಡಲಿದ್ದಾರೆ., ಬಾಗೇಪಲ್ಲಿ, ಚಳ್ಳಕೆರೆ, ದಾವಣಗೆರೆ, ಹೊನ್ನಾಳಿ, ಚನ್ನಗಿರಿ, ಶಿವಮೊಗ್ಗ, ಶಿವಾಜಿನಗರ, ಪಾವಗಡ ಕ್ಷೇತ್ರಗಳ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.
Laxmi News 24×7