ಮಂಡ್ಯ: ಊಟ ತಿಂಡಿ ಆಮಿಷ ತೋರಿಸಿ ಅಪ್ರಾಪ್ತ ಬಾಲಕಿಯ ಮೇಲೆ 63 ವರ್ಷದ ವೃದ್ಧ ಬಲವಂತವಾಗಿ ಅತ್ಯಾಚಾರವೆಸಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ವ್ಯಾಪ್ತಿಯ ಗ್ರಾಮವೊಂದರಲ್ಲಿ 63 ವರ್ಷದ ವಯೋವೃದ್ಧ ಗ್ರಾಮದ ಹದಿನೈದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಹಲಗೂರು ಪಟ್ಟಣಕ್ಕೆ ಕರೆದುಕೊಂಡು ಬಂದಿದ್ದನು. ಈ ವೇಳೆ ಬಾಲಕಿಗೆ ಊಟ ತಿಂಡಿ ಕೊಡಿಸಿ ನಂತರ ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಬಾಲಕಿ ಆರೋಪಿ ವಿರುದ್ಧ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹಲಗೂರು ವೃತ್ತ ನಿರೀಕ್ಷಕರು ಶ್ರೀಧರ್ ಮತ್ತು ಪಿಎಸ್‍ಐ ನೇತೃತ್ವದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.