Breaking News
Home / ರಾಜಕೀಯ / ಊಟ, ತಿಂಡಿ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿ ಮೇಲೆ 63ರ ವೃದ್ಧನಿಂದ ಅತ್ಯಾಚಾರ

ಊಟ, ತಿಂಡಿ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿ ಮೇಲೆ 63ರ ವೃದ್ಧನಿಂದ ಅತ್ಯಾಚಾರ

Spread the love

ಮಂಡ್ಯ: ಊಟ ತಿಂಡಿ ಆಮಿಷ ತೋರಿಸಿ ಅಪ್ರಾಪ್ತ ಬಾಲಕಿಯ ಮೇಲೆ 63 ವರ್ಷದ ವೃದ್ಧ ಬಲವಂತವಾಗಿ ಅತ್ಯಾಚಾರವೆಸಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ವ್ಯಾಪ್ತಿಯ ಗ್ರಾಮವೊಂದರಲ್ಲಿ 63 ವರ್ಷದ ವಯೋವೃದ್ಧ ಗ್ರಾಮದ ಹದಿನೈದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಹಲಗೂರು ಪಟ್ಟಣಕ್ಕೆ ಕರೆದುಕೊಂಡು ಬಂದಿದ್ದನು. ಈ ವೇಳೆ ಬಾಲಕಿಗೆ ಊಟ ತಿಂಡಿ ಕೊಡಿಸಿ ನಂತರ ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಬಾಲಕಿ ಆರೋಪಿ ವಿರುದ್ಧ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. 

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹಲಗೂರು ವೃತ್ತ ನಿರೀಕ್ಷಕರು ಶ್ರೀಧರ್ ಮತ್ತು ಪಿಎಸ್‍ಐ ನೇತೃತ್ವದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ