ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಅವರು ಸೋಮವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ (Sriperumbudur) ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ್ದರು. ಈ ಕಟ್ಟಡದಲ್ಲಿ ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್‍ಗಳನ್ನು ನಿರ್ಮಿಸಲಾಗಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಶ್ರೀಪೆರಂಬದೂರಿನಲ್ಲಿ ತಮಿಳುನಾಡು ರಾಜ್ಯ ಕೈಗಾರಿಕೆಗಳ ಉತ್ತೇಜನ ನಿಗಮ (SIPCOT) 1.80 ಕೋಟಿ ರೂಪಾಯಿ ಬಜೆಟ್‍ನಲ್ಲಿ ಹೊಸದಾಗಿ ನಿರ್ಮಿಸಲಾದ ಕಟ್ಟಡದಲ್ಲಿ ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್‍ಗಳಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ಸೋಮವಾರ ಸ್ಟಾಲಿನ್ ಅವರು ಇತರ ಯೋಜನೆಗಳೊಂದಿಗೆ ಈ ಕಟ್ಟಡವನ್ನು ಉದ್ಘಾಟಿಸಿದರು. ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್‍ಗಳಿರುವ ಈ ಆಫೀಸ್ ಕಟ್ಟಡ ನಿರ್ಮಾಣ ಪ್ರಾಜೆಕ್ಟ್‌ಗೆ ಸುಮಾರು 1.80 ಕೋಟಿ ರೂಪಾಯಿ ಖರ್ಚಾಗಿದೆ.