Breaking News

ಮೂರು ವಿಧೇಯಕಗಳಿಗೆ ಅನುಮೋದನೆ ನೀಡಿದ ರಾಜ್ಯಪಾಲರು.. ರಾಜಪತ್ರ ಹೊರಡಿಸಿದ ಸರ್ಕಾರ

Spread the love

ಬೆಂಗಳೂರು : ವಿಧಾನಮಂಡಲದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ ಸೇರಿ ಮೂರು ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.

ಎರಡು ಪರೀಕ್ಷಾ ಮಂಡಳಿ ವಿಲೀನ: ರಾಜ್ಯ ಸರ್ಕಾರ ಈ ಸಂಬಂಧ ರಾಜಪತ್ರ ಹೊರಡಿಸಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸುವ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಅನುಷ್ಠಾನಗೊಳಿಸಲಾಗಿದೆ. ಹೊಸ ಶಿಕ್ಷಣ ನೀತಿ ಅನ್ವಯ ಎರಡು ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಎಂದು ನಾಮಕಾರಣ ಮಾಡಲಾಗಿದೆ. ಮಂಡಳಿಗೆ ಓರ್ವ ಐಎಎಸ್ ಅಧಿಕಾರಿಯನ್ನು ನೇಮಿಸಲಾಗುತ್ತಿದ್ದು, ಪರೀಕ್ಷೆ ವಿಷಯಗಳನ್ನು ಹೊಸದಾಗಿ ರಚನೆಯಾಗುವ ಮಂಡಳಿಯು ನೋಡಿಕೊಳ್ಳಲಿದೆ.

ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಪರಿಷ್ಕರಣೆ: ಗ್ರಾಮೀಣ ಜನಸಂಖ್ಯೆಯ ಆಧಾರದ ಮೇಲೆ ಮತ್ತೆ ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಪರಿಷ್ಕರಣೆ ಮಾಡುವ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ಮತ್ತೆ ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಹೆಚ್ಚಾಗಲಿದೆ. ವಿಧೇಯಕ ಅಂಗೀಕಾರ ಮೂಲಕ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ಏಳು ಲಕ್ಷ ಗ್ರಾಮೀಣ ಜನಸಂಖ್ಯೆ ಹೊಂದಿರುವ ಜಿಲ್ಲೆಯಲ್ಲಿ ಕನಿಷ್ಠ 20 ಮಂದಿ ಜಿಲ್ಲಾಪಂಚಾಯತ್ ಸದಸ್ಯರು ಇರಬೇಕು ಎಂಬ ನಿಯಮವನ್ನು 25 ಜಿಲ್ಲಾ ಪಂಚಾಯತ್ ಸದಸ್ಯರು ಎಂದು ತಿದ್ದುಪಡಿ ಮಾಡಲಾಗಿದೆ. 7 ರಿಂದ 9.5 ಲಕ್ಷ ಜನಸಂಖ್ಯೆಗೆ 28 ಜಿಲ್ಲಾಪಂಚಾಯತ್ ಸದಸ್ಯರು ಇರಬೇಕು. ಇನ್ನು 2.30 ಲಕ್ಷ ಗ್ರಾಮೀಣ ಜನಸಂಖ್ಯೆಗೆ ಕನಿಷ್ಠ 12 ತಾಲೂಕು ಪಂಚಾಯತ್ ಸದಸ್ಯರು ಇರಬೇಕು ಎಂದು ಉಲ್ಲೇಖಿಸಲಾಗಿದೆ.

Karnataka Board of Secondary Education Examination  Governor approved three bills  Bangalore Metropolitan Corporation Amendment Bill  Karnataka Gram Swaraj Panchayat Raj Amendment Bill  ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ವಿಧೇಯಕ  ವಿಧೇಯಕಗಳಿಗೆ ಅನುಮೋದನೆ ನೀಡಿದ ರಾಜ್ಯಪಾಲರು  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ  ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ  ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ  ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಪರಿಷ್ಕರಣೆ  ಬಿಬಿಎಂಪಿ ವಾರ್ಡ್ ಮೀಸಲಾತಿ  ಎರಡು ಪರೀಕ್ಷಾ ಮಂಡಳಿ ವಿಲೀನ


Spread the love

About Laxminews 24x7

Check Also

ಬಳ್ಳಾರಿ ಬಳಿಕ ರಾಯಚೂರು ಜಿಲ್ಲೆಯಲ್ಲಿ 1 ತಿಂಗಳಲ್ಲಿ ನಾಲ್ವರು ಬಾಣಂತಿಯರ ಸಾವು

Spread the love ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ನಾಲ್ವರು ಬಾಣಂತಿಯರು ಸಿಸೇರಿಯನ್ ಶಸ್ತ್ರಚಿಕಿತ್ಸೆಯ ನಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ