ಬಳ್ಳಾರಿ: ಜಿಲ್ಲೆಯಲ್ಲಿ ಪಾಲಿಕೆ ವತಿಯಿಂದ ರಾತ್ರೋರಾತ್ರಿ ಜೆಸಿಬಿ ಮೂಲಕ ಬ್ಯಾನರ್ ತೆರವುಗೊಳಿಸಿದಕ್ಕೆ ಮಹಾನಗರ ಪಾಲಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಪರವಾನಗಿ ಇಲ್ಲದೆ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಲಾಗಿತ್ತು. ಪಾಲಿಕೆ ಆಯುಕ್ತ ರುದ್ರೇಶ್ ನೇತೃತ್ವದಲ್ಲಿ ಸಂಗಮ್ಮ ಸರ್ಕಲ್, ರಾಯಲ್ ಸರ್ಕಲ್ ಸೇರಿದಂತೆ ಹಲವೆಡೆ ಬ್ಯಾನರ್ ತೆರವುಗೊಳಿಸಲಾಯಿತು. ಸಮಾವೇಶ ಹಿನ್ನೆಲೆ ಅತಿ ಹೆಚ್ಚು ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಬ್ಯಾನರ್ ತೆರವಿಗೆ ಕಾಂಗ್ರೆಸ್ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೇವಲ ಕಾಂಗ್ರೆಸ್ ಬ್ಯಾನರ್ ತೆರವು, ಬಿಜೆಪಿ ಬ್ಯಾನರ್ ತೆರವು ಏಕಿಲ್ಲ? ಇಂತಹ ರಾಜಕೀಯ ಸರಿಯಿಲ್ಲ. ಬಿಜೆಪಿಯವರು ಪರವಾನಗಿ ಪಡೆದಿದ್ದಾರೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.