Breaking News

ಹೂಡಿಕೆದಾರರಿಗೆ ಹಣ ವಾಪಸ್ ನೀಡದೇ ವಂಚನೆ ಆರೋಪ : ಬೆಂಗಳೂರಿನಲ್ಲಿ ಶುಶೃತಿ ಸಹಕಾರ ಬ್ಯಾಂಕ್ ಸೇರಿ 14 ಕಡೆ `CCB’ ದಾಳಿ

Spread the love

ಬೆಂಗಳೂರು : ಹೂಡಿಕೆದಾರರಿಗೆ ಹಣ ವಾಪಸ್ ನೀಡದೇ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶುಶೃತಿ ಸಹಕಾರ ಬ್ಯಾಂಕ್ ನ ಕೇಂದ್ರ ಕಚೇರಿ ಸೇರಿದಂತೆ 14 ಕಡೆ ದಾಳಿ ನಡೆಸಿದೆ.

 

ಇಂದು ಬೆಂಗಳೂರಿನ ಶುಶೃತಿ ಸಹಕಾರ ಬ್ಯಾಂಕ್ ಕೇಂದ್ರ ಕಚೇರಿ ಸೇರಿದಂತೆ 14 ಕಚೇರಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ಬೆಂಗಳೂರಿನ ವಿಲ್ಸನ್ ಗಾರ್ಡನ್, ಪೀಣ್ಯ, ರಾಜಗೋಪಾಲನಗರ, ಚಿಕ್ಕಜಾಲ ಸೇರಿದಂತೆ ಹಲವಡೆ ಐವರು ಎಸಿಪಿ ಸೇರಿದಂತೆ 60 ಕ್ಕೂ ಹೆಚ್ಚು ಪೊಲೀಸರ ತಂಡದಿಂದ ದಾಳಿ ನಡೆಸಲಾಗಿದೆ.

 

ಹೂಡಿಕೆದಾರರಿಗೆ ಹಣ ವಾಪಸ್ ನೀಡದೇ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಸಹಕಾರ ಬ್ಯಾಂಕ್ ವಿರುದ್ಧ ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಾಗಿತ್ತು. ಎಲ್ಲ ಪ್ರಕರಣಗಳನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ಇಂದು ಸಿಸಿಬಿ ಪೊಲೀಸರು ಬೆಂಗಳೂರಿನ 14 ಕಡೆ ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ