Breaking News

ಬಸ್ ನಿಲ್ದಾಣದಲ್ಲಿ ಶಾಲಾ ಬಾಲಕಿಗೆ ತಾಳಿ ಕಟ್ಟಿದ ಕಾಲೇಜು ವಿದ್ಯಾರ್ಥಿ

Spread the love

ಕಡಲೂರು(ತಮಿಳುನಾಡು): ಚಿದಂಬರಂನ ಬಸ್​ ನಿಲ್ದಾಣವೊಂದರಲ್ಲಿ ಶಾಲಾ ವಿದ್ಯಾರ್ಥಿನಿಯೊಬ್ಬರಿಗೆ ಕಾಲೇಜು ವಿದ್ಯಾರ್ಥಿಯೊಬ್ಬ ತಾಳಿ ಕಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಮವಸ್ತ್ರದಲ್ಲಿರುವ ಶಾಲಾ ಬಾಲಕಿಯೊಬ್ಬಳು ಕಾಲೇಜು ವಿದ್ಯಾರ್ಥಿಯೊಂದಿಗೆ ಚಿದಂಬರಂನಲ್ಲಿರುವ ಗಾಂಧಿ ಪ್ರತಿಮೆ ಬಳಿ ಬಸ್ ನಿಲ್ದಾಣದಲ್ಲಿ ಕುಳಿತು ತಾಳಿ ಕಟ್ಟಿಸಿಕೊಳ್ಳುತ್ತಿರುವುದು ವಿಡಿಯೋದಲ್ಲಿದೆ.

ಬಸ್ ನಿಲ್ದಾಣದಲ್ಲಿ ಶಾಲಾ ಬಾಲಕಿಗೆ ತಾಳಿ ಕಟ್ಟಿದ ಕಾಲೇಜು ವಿದ್ಯಾರ್ಥಿವಿದ್ಯಾರ್ಥಿ ತನ್ನ ಜೇಬಿನಿಂದ ತಾಳಿ ದಾರವನ್ನು ತೆಗೆದು ಬಾಲಕಿಯ ಕುತ್ತಿಗೆಗೆ ಕಟ್ಟುತ್ತಿರುವ ದೃಶ್ಯವನ್ನು ಕೆಲವರು ಮೊಬೈಲ್​ ಮೂಲಕ ರೆಕಾರ್ಡ್​ ಮಾಡಿದ್ದಾರೆ. ಇದಿಷ್ಟೇ ಅಲ್ಲದೇ ಅಲ್ಲಿದ್ದ ಇತರ ವಿದ್ಯಾರ್ಥಿಗಳು ಅವರ ಮೇಲೆ ಹೂ ಹಾಕಿ ಆಶೀರ್ವಾದ ಮಾಡಿದ್ದಾರೆ.

ಈ ವಿಡಿಯೋವನ್ನು ಪರಿಶೀಲಿಸಿದಾಗ ಬಾಲಕಿ ಸರ್ಕಾರಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು, ಆಕೆಗೆ ತಾಳಿ ಕಟ್ಟಿದ ವಿದ್ಯಾರ್ಥಿ ಖಾಸಗಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಭಾಗಿಯಾಗಿರುವ ವಿದ್ಯಾರ್ಥಿಗಳ ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ