ಬಳ್ಳಾರಿ: ಸರ್ಕಾರ ತಪ್ಪು ಮಾಡಿದಾಗ ಅದನ್ನು ಪ್ರಶ್ನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ ಈ ಬಿಜೆಪಿ ಸರ್ಕಾರವನ್ನು (BJP Government) ನಾವು ಯಾರೂ ಪ್ರಶ್ನೆ ಮಾಡುವಹಾಗಿಲ್ಲ. ಪ್ರಶ್ನೆ ಮಾಡಿದರೆ ನಮ್ಮ ಮೇಲೆ ಕೇಸ್ ಹಾಕ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅಸಮಾಧಾನ ವ್ಯಕ್ತಪಡಿಸಿದರು.
ಭಾರತ್ ಜೋಡೋ ಯಾತ್ರೆ (Bharath Jodo Yatra) ಹಿನ್ನೆಲೆ ಬಳ್ಳಾರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೇ 15 ರಂದು ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ (Rahul Gandhi) ನಿಮ್ಮೆಲ್ಲರನ್ನುದ್ದೇಶಿ ಮಾತನಾಡಲಿದ್ದಾರೆ ಎಂದು ಹೇಳಿದರು.
ಈ ಸರ್ಕಾರ ನಮ್ಮ ಕಾರ್ಯಕರ್ತರು ನಾಯಕರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ಕ್ರಿಮಿನಲ್ ಕೇಸ್ (Criminal Case) ದಾಖಲಿಸುತ್ತಿದೆ, ನಾಗರಿಕರಿಗೆ ದೊಡ್ಡ ಹೊಡೆತ ನೀಡಿದೆ. ಸರ್ಕಾರ ತಪ್ಪು ಮಾಡಿದಾಗ ಅದನ್ನು ಪ್ರಶ್ನೆ ಮಾಡುವುದು ಪ್ರತಿ ನಾಗರಿಕರ ಹಕ್ಕು. ಆದರೆ ಈ ಸರ್ಕಾರವನ್ನು ನಾವು ಯಾರೂ ಪ್ರಶ್ನೆ ಮಾಡುವ ಹಾಗೆ ಇಲ್ಲ. ಮೋದಿ (Narendra Modi), ಅಮಿತ್ ಶಾ (Amit Shah), ಬೊಮ್ಮಾಯಿ (Basavaraj Bommai) ಅವರನ್ನ ನಾವು ಯಾರೂ ಪ್ರಶ್ನೆ ಮಾಡುವ ಹಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು.