Breaking News

2023ರ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ ಕೇಳಿದ ಕನ್ನಡ ನಟಿ!

Spread the love

ಬೆಂಗಳೂರು, ಅಕ್ಟೋಬರ್ 12; ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇದೆ. ರಾಜಕೀಯ ಪಕ್ಷಗಳ ತಯಾರಿ ಚುನಾವಣೆಗೆ ಜೋರಾಗಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಸಹ ಹೆಚ್ಚಾಗುತ್ತಿದೆ.

ಮುಂದಿನ ಚುನಾವಣೆಗೆಕಾಂಗ್ರೆಸ್ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ತುಸು ಹೆಚ್ಚಿದೆ.

ಈಗ ಕನ್ನಡದ ನಟಿಯೊಬ್ಬರು ನಾನು ಸಹ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಹೇಳುವ ಮೂಲಕ ಚುನಾವಣಾ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ.

 

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿದೆ. ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ನಟಿ ಮಾಧ್ಯಮಗಳ ಜೊತೆ ಮಾತನಾಡುವಾಗ ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದಾರೆ.

 

ನಟಿ ಭಾವನಾ ರಾಮಣ್ಣ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಬಳಿಕ ಬಿಜೆಪಿ ಸೇರಿದ್ದರು. 2021ರಲ್ಲಿ ಅವರು ಕಾಂಗ್ರೆಸ್‌ಗೆ ಪುನಃ ಮರಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆ.


Spread the love

About Laxminews 24x7

Check Also

ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಉಂಗುರ ಹಾಗೂ ಪರ್ಸ್ ಸಿಕ್ಕಿದೆ

Spread the loveಕುಮಟಾ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಉಂಗುರ ಹಾಗೂ ಹಣವಿರುವ ಪರ್ಸ್ ಒಂದು ಸಾರಿಗೆ ಸಂಸ್ಥೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ