ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಎನ್ ಟಿ ಬೊಮ್ಮಣ್ಣ ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎನ್ ಟಿ ಬೊಮ್ಮಣ್ಣ ಒಂದು ತಿಂಗಳ ಹಿಂದೆ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಎನ್‌ಟಿ ಬೊಮ್ಮಣ್ಣ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು.
ಎನ್.ಟಿ ಬೊಮ್ಮಣ್ಣ 1985 ರಿಂದ 1994 ರವರೆಗೆ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. 2018 ರ ಜೆಡಿಎಸ್ ಅಭ್ಯರ್ಥಿಯಾಗಿ, ಎನ್. ವೈ ಗೋಪಾಲಕೃಷ್ಣ ಅವರ ವಿರುದ್ಧ ಪರಾಭವಗೊಂಡರು. 60 ರ ದಶಕದಲ್ಲಿ ರಾಜಕೀಯಕ್ಕೆ ಧುಮುಕಿದ್ದ ಅವರು, ತಾಲೂಕು ಬೋರ್ಡ್ ಅಧ್ಯಕ್ಷರಾಗಿ ನಂತರ ಶಾಸಕರಾಗಿದ್ದರು. ನಾಳ ಕೂಡ್ಲಿಗಿ ತಾಲೂಕಿನ ಸ್ವಗ್ರಾಮದಲ್ಲಿ ನರಸಿಂಹ ಗಿರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.