Breaking News

ಹಿರಣ್ಯಕೇಶಿ ಹಂಗಾಮಿಗೆ ಚಾಲನೆ; 14 ಲಕ್ಷ ಮೆ.ಟನ್‌ ಕಬ್ಬು ನುರಿಸುವ ಗುರಿ

Spread the love

ಹುಕ್ಕೇರಿ: ಸುಮಾರು 7 ದಶಕಗಳ ಹಿಂದೆ ರೈತರ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ದೇಶದಲ್ಲಿ ಪ್ರಥಮವಾಗಿ ಕಾರ್ಖಾನೆಗಳ ಪ್ರಾರಂಭದ ಹಂತದಲ್ಲಿ ದಿ| ಅಪ್ಪಣಗೌಡ ಪಾಟೀಲರ ನೇತೃತ್ವದಲ್ಲಿ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯು ಸ್ಥಾಪನೆಯಾಗಿ ರೈತರ ಬಾಳಿಗೆ ವರದಾನವಾಗಿರುವುದು ನಮ್ಮೆಲ್ಲರ ಭಾಗ್ಯ ಎಂದು ನಿಡಸೋಸಿ ಸಿದ್ದ ಸಂಸ್ಥಾನಮಠದ ಪಂಚಮಶಿವಲಿಂಗೇಶ್ವರ ಸ್ವಾಮಿಗಳು ಹೇಳಿದರು.

 

ಮಂಗಳವಾರ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ 62ನೇ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ನಮ್ಮೆಲ್ಲರ ಆರ್ಥಿಕ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಸ್ಥಾಪನೆಗೊಂಡಿರುವ ಕಾರ್ಖಾನೆಗೆ ರೈತರೇ ಜೀವಾಳ. ಕಾರ್ಖಾನೆ ಉಳಿಸಿ ಬೆಳೆಸುವದು ಎಲ್ಲರ ಕರ್ತವ್ಯ ಹಾಗೂ ಜವಾಬ್ದಾರಿ ಎಂದರು.

ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಮೇಶ ಕತ್ತಿ, ಕಾರ್ಖಾನೆ ಚೇರಮನ್‌ ನಿಖೀಲ್‌ ಕತ್ತಿ, ಉಪಾಧ್ಯಕ್ಷ ಶ್ರೀಶೈಲಪ್ಪ ಮಗದುಮ್ಮ, ಸುರೇಶ ಬೆಲ್ಲದ, ಬಸವರಾಜ ಕಲ್ಲಟ್ಟಿ, ಪ್ರಭುದೇವ ಪಾಟೀಲ, ಅಶೋಕ ಪಟ್ಟಣಶೆಟ್ಟಿ, ಬಸಪ್ಪ ಮರಡಿ, ಸುರೇಂದ್ರ ದೊಡ್ಡಲಿಂಗನವರ, ಶಿವಪುತ್ರ ಶಿರಕೋಳಿ, ಸಂಗಮ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ, ಜಿ.ಪಂ ಮಾಜಿ ಸದಸ್ಯ ಪವನ ಕತ್ತಿ, ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘದ ಅಧ್ಯಕ್ಷ ಕಲಗೌಡ ಪಾಟೀಲ, ಪುರಸಭೆ
ಅಧ್ಯಕ್ಷ ಎ.ಕೆ. ಪಾಟೀಲ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಸತ್ಯೆಪ್ಪಾ ನಾಯಿಕ, ಮುಖಂಡರಾದ ರಮೇಶ ಕುಲಕರ್ಣಿ, ಅಮರ ನಲವಡೆ, ಶ್ರೀಕಾಂತ ಹತನೂರೆ, ಗಜಾನನ ಕ್ವಳ್ಳಿ, ಅಧೀಕ್ಷಕ ಎಸ್‌.ಎಸ್‌.ನಾಶಿಪುಡಿ, ಜಯಸಿಂಗ ಸನದಿ ಮತ್ತಿತರರು ಉಪಸ್ಥಿತರಿದ್ದರು.

ನಿರ್ದೇಶಕ ಅಶೋಕ ಪಟ್ಟಣಶೆಟ್ಟಿ ಸ್ವಾಗತಿಸಿದರು. ವ್ಯವಸ್ಥಾಪಕ ನಿರ್ದೇಶಕ ಎಸ್‌.ಆರ್‌.ಕರ್ಕಿನಾಯಿಕ ನಿರೂಪಿಸಿದರು. ಬಾಬಾಸಾಹೇಬ ಅರಬೋಳೆ ವಂದಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ