Breaking News

ಸುಪ್ರೀಂಕೋರ್ಟ್ `ಹಿಜಾಬ್’ ತೀರ್ಪಿಗೆ ಕ್ಷಣಗಣನೆ : ಕರ್ನಾಟಕದಲ್ಲಿ ಹೈ ಅಲರ್ಟ್

Spread the love

ವದೆಹಲಿ: ಹಿಜಾಬ್ ( Hijab Row) ವಿವಾದದ ಕುರಿತು ಸುಪ್ರೀಂಕೋರ್ಟ್ ಅಕ್ಟೋಬರ್ 13 ರ ಇಂದು ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದ್ದು,ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

 

 

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಉಡುಪಿ, ತುಮಕೂರು ಹಾಗೂ ಬೆಂಗಳೂರು ನಗರದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗುತ್ತಿದೆ. ಸೂಕ್ತ ಭದ್ರತೆ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಅವರು ವಿವಿಧ ವಿಭಾಗಗಲ್ಲಿನ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.

ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ , ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ( Supreme Court) ಗುರುವಾರ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಲಿದೆ.

 

ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ನಿವೃತ್ತರಾಗುವ ಮೊದಲು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ.. ನ್ಯಾಯಪೀಠದ ಮುಖ್ಯಸ್ಥರಾಗಿರುವ ನ್ಯಾಯಮೂರ್ತಿ ಗುಪ್ತಾ ಅವರು ಅಕ್ಟೋಬರ್ 16. ರಂದು ನಿವೃತ್ತರಾಗಲಿರುವುದರಿಂದ ಈ ಅರ್ಜಿಗಳ ಬಗ್ಗೆ ಇಂದು ತೀರ್ಪು ಹೊರಬೀಳುವ ನಿರೀಕ್ಷೆಯಿದೆ.

ದೇಶ-ವಿದೇಶಗಳಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದ್ದ, ಉಡುಪಿಯಲ್ಲಿ ಆರಂಭವಾಗಿ ನಂತರ ರಾಜ್ಯಾದ್ಯಂತ ಸಂಘರ್ಷ ಸೃಷ್ಟಿಸಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿದೆ, . ಉಡುಪಿಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್‌ಗೆ ತರಗತಿಯಲ್ಲಿ ನಿರ್ಬಂಧ ವಿಧಿಸಿದ ಕಾಲೇಜಿನ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಚ್‌ ಮೊರೆ ಹೋಗಿದ್ದರು.

ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಾಲಾ, ಕಾಲೇಜಿನ ತರಗತಿಗಳಿಗೆ ಹಿಜಾಬ್‌ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿತ್ತು. ಅಲ್ಲದೆ, ಹಿಜಾಬ್‌ ಧಾರಣೆ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದೂ ವ್ಯಾಖ್ಯಾನಿಸಿತ್ತು. ಹೈಕೋರ್ಚ್‌ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಚ್‌ ಮೊರೆ ಹೋಗಿದ್ದರು. ಶಾಲಾ ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವಂತಹ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಫೆಬ್ರವರಿ 5, 2022 ರ ಆದೇಶ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಅರ್ಜಿದಾರರ ಪರ ವಕೀಲರು ವಾದಿಸಿದ್ದರು.ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ಬೆಂಬಲಿಸಿ ನಡೆದ ಪ್ರತಿಭಟನೆಯು ಕೆಲವು ವ್ಯಕ್ತಿಗಳ ‘ಸ್ವಯಂಪ್ರೇರಿತ ಕೃತ್ಯ’ವಲ್ಲ ಎಂದು ಪ್ರತಿಪಾದಿಸಿದ ರಾಜ್ಯದ ವಕೀಲರು, ಸರ್ಕಾರವು ತನ್ನಂತೆಯೇ ವರ್ತಿಸದಿದ್ದರೆ ಸಾಂವಿಧಾನಿಕ ಕರ್ತವ್ಯವನ್ನು ನಿರ್ಲಕ್ಷಿಸಿದ್ದಕ್ಕಾಗಿ ತಪ್ಪಿತಸ್ಥನಾಗುತ್ತಿತ್ತು ಎಂದು ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದರು.


Spread the love

About Laxminews 24x7

Check Also

ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ

Spread the love ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ