Breaking News

ಅ.15ರಂದು ಡಾ.ಪ್ರಭಾಕರ ಕೋರೆ ಅಮೃತ ಮಹೋತ್ಸವ

Spread the love

ಬೆಳಗಾವಿ: ಇಲ್ಲಿನ ನೆಹರೂ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಅ.15ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆದಿವೆ. ರಾಜ್ಯ ಹಾಗೂ ಹೊರರಾಜ್ಯಗಳಿಂದ 75 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ.

 

ಈ ಬಗ್ಗೆ ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ, ‘ಅಮೃತ ಮಹೋತ್ಸವದಲ್ಲಿ ಭಾಗವಹಿಸಲು ಬರುವ ಜನರಿಗಾಗಿ ತಾಲ್ಲೂಕಿನ ಭೂತರಾಮನಹಟ್ಟಿಯ ಮುಕ್ತಿಮಠ, ಕಣಬರ್ಗಿಯ ಸಂಕಲ್ಪ ಗಾರ್ಡನ್‌, ನಿಲಜಿ, ಧರ್ಮನಾಥ ಭವನ, ನಾಗನೂರು ರುದ್ರಾಕ್ಷಿಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಶ್ರೀನಗರ, ಮಹಾಂತೇಶ ನಗರ, ಬಾಕ್ಸೈಟ್‌ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್‌ ಇಲಾಖೆಯೊಂದಿಗೆ ಚರ್ಚಿಸಿ ಇನ್ನೂ ಹಲವೆಡೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗುವುದು’ ಎಂದರು.

‘ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕೇಂದ್ರ ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ ಆಗಮಿಸುವರು. ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ ಸಾವಂತ್‌, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡನವೀಸ್‌, ಶಾಸಕರಾದ ಬಿ.ಎಸ್‌.ಯಡಿಯೂರಪ್ಪ, ಜಗದೀಶ ಶೆಟ್ಟರ್, ಆರ್‌.ವಿ.ದೇಶಪಾಂಡೆ, ಮಹಾರಾಷ್ಟ್ರದ ಸಚಿವ ರಾಧಾಕೃಷ್ಣ ಪಾಟೀಲ, ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ಆಗಮಿಸುವರು’ ಎಂದು ಮಾಹಿತಿ ನೀಡಿದರು.

‘ಮಹಾರಾಷ್ಟ್ರದ ಜ್ಯೋತಿಬಾ ಫುಲೆ ಆರೋಗ್ಯ ಯೋಜನೆಯೊಂದಿಗೆ ಕೆಎಲ್‌ಇ ಸಂಸ್ಥೆಯ ಆಸ್ಪತ್ರೆ ಒಪ್ಪಂದ ಮಾಡಿಕೊಂಡಿದೆ. ಗೋವಾದಿಂದಲೂ ಹೆಚ್ಚಿನ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಮೂರು ರಾಜ್ಯಗಳಲ್ಲಿ ಕೆಎಲ್‌ಇ ಸಂಸ್ಥೆ ತನ್ನ ಛಾಪು ಮೂಡಿಸಿದೆ. ಆಯಾ ರಾಜ್ಯಗಳ ನಾಯಕರೂ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ’ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ