Breaking News
Home / ಜಿಲ್ಲೆ / ಬೆಂಗಳೂರು / 10 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.B.S.Y.

10 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.B.S.Y.

Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯೋ? ಪುನಾರಚನೆಯೋ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ ಬದಲು ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇನ್ನು ಎರಡ್ಮೂರು ದಿನಗಳಲ್ಲಿ ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಏನು ಸಮಸ್ಯೆ ಇಲ್ಲ.

ಮೂರು ದಿನದಲ್ಲಿ ದೆಹಲಿಗೆ ಹೊರಡುತ್ತಿದ್ದು, ಅಲ್ಲಿಂದ ಬಂದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು. ಭಾನುವಾರ ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಸಿದರು. ದೆಹಲಿಗೆ ಬನ್ನಿ ಎಂದು ಬುಲಾವ್ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು 10 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ