Breaking News

ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು

Spread the love

ಬೆಂಗಳೂರು: ಅಧಿವೇಶನ ಬೆನ್ನಲ್ಲೇ ಸೋಂಕಿತ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್‍ನ ಹಿರಿಯ ಮುಖಂಡ ಹೆಚ್‍ಕೆ ಪಾಟೀಲ್‍ಗೆ ಸೋಂಕು ದೃಢವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಧಿವೇಶನದ ಬೆನ್ನಲ್ಲೇ ನಿನ್ನೆ ದಿನೇಶ್ ಗುಂಡೂರಾವ್‍ಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಸಚಿವ ಮಾಧುಸ್ವಾಮಿ ಅವರಿಗೆ ಸೋಂಕು ದೃಢವಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಿಎಸ್‍ವೈ ಸೇರಿದಂತೆ ಹಲವು ನಾಯಕರು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಚಿವರ ಕಾರಿನ ಚಾಲಕ ಮತ್ತು ಮನೆಯ ಕೆಲಸಗಾರನಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮಾಧುಸ್ವಾಮಿ ಅವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು ಎಂಬ ಮಾಹಿತಿ ಲಭಿಸಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ