ದಾವಣಗೆರೆ: ಶಾಲೆಯೊಂದರ ಪ್ರವೇಶ ದ್ವಾರದಲ್ಲೇ ಹೆಜ್ಜೇನು ಗೂಡು ಕಟ್ಟಿದ್ದು, ಶಾಲೆಯ 50ಕ್ಕೂ ಹೆಚ್ಚು ಮಕ್ಕಳನ್ನು ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ್ದಾರೆ. ದಾವಣಗೆರೆಯಲ್ಲಿ ಈ ಪ್ರಕರಣ ನಡೆದಿದೆ.
ಇಲ್ಲಿನ ಹರಿಹರ ತಾಲೂಕು ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಯ ಪ್ರವೇಶ ದ್ವಾರದಲ್ಲಿ ಗುರುವಾರ ಸಂಜೆ ಹೆಜ್ಜೇನುಗಳು ಗೂಡು ಕಟ್ಟಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆತಂಕಕ್ಕೆ ಒಳಗಾದರು.
ಈ ಬಗ್ಗೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ದಾವಣಗೆರೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 50ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಿದರು.

ಶಾಲೆಗೆ ಒಂದೇ ಪ್ರವೇಶದ್ವಾರವಿದ್ದು ಅಲ್ಲಿಯೇ ಜೇನುಗೂಡು ಕಟ್ಟಿದ್ದರಿಂದ ಹಿಂಭಾಗದ ಕಾಂಪೌಂಡ್‌ಗೆ ಏಣಿ ಹಾಗೂ ರೋಪ್ ಹಾಕಿದ ಅಗ್ನಿಶಾಮಕ ಸಿಬ್ಬಂದಿ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ ತಿಳಿಸಿದರು.
Laxmi News 24×7