Breaking News
Home / ಜಿಲ್ಲೆ / ಬೆಳಗಾವಿ / ಬಸವರಾಜ್ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶನ ಡಿಎಸ್‌ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ

ಬಸವರಾಜ್ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶನ ಡಿಎಸ್‌ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ

Spread the love

ಖಾಸಗಿ ಕಾರ್ಯಕ್ರಮವೊಂದಕ್ಕೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ಡಿಎಸ್‌ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೌದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಬೈಲಹೊಂಗಲ ಡಿವೈಎಸ್‌ಪಿ ಶಿವಾನಂದ ಕಟಗಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಎಸ್‌ಎಸ್ ಕಾರ್ಯಕರ್ತರು ಸಿಎಂರವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದರು. ಈ ವೇಳೆ ಮುಂಜಾಗೃತಾ ಕ್ರಮವಾಗಿ ಡಿಎಸ್‌ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರ ಕ್ರಮಕ್ಕೆ ಡಿಎಸ್‌ಎಸ್ ಕಾರ್ಯಕರ್ತರು ತೀವ್ರ ಆಕ್ರೋಶವನ್ನು ಹೊರಹಾಕಿದರು. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಬಳಿ ಬೀಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

ಬೆಳಗಾವಿ ನಗರದಲ್ಲಿಂದು ಮಧ್ಯಾಹ್ನದ ವೇಳೆಗೆ ಡಾ. ಪ್ರಭಾಕರ ಕೋರೆರವರ ಅಮೃತ ಮಹೋತ್ಸವ ಕಾರ್ಯಕ್ರಮ ಹಿನ್ನೆಲೆ ಸಿಎಂ ಸೇರಿದಂತೆ ಗಣ್ಯರ ದಂಡು ಬೆಳಗಾವಿಗೆ ಅಗಮಿಸಿದ್ದಾರೆ. ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಗಣ್ಯದ ದಂಡು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಡಿಎಸ್‌ಎಸ್ ಕಾರ್ಯಕರ್ತರು ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದರು. ಬೈಲಹೊಂಗಲ ಡಿಎಸ್ಪಿ ಶಿವಾನಂದ ಕಟಗಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಎಸ್‌ಎಸ್ ಕಾರ್ಯಕರ್ತರು ಈ ವೇಳೋಎ ಧರಣಿಯನ್ನು ನಡೆಸಿದರು. ಈ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ೧೦ಕ್ಕೂ ಹೆಚ್ಚು ದಲಿತ ಸಂಘಟನೆಯ ಮುಖಂಡರನ್ನು ಮಾರಿಹಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ