ವಿಜಯಪುರ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ಜೊತೆ ಶಾಮೀಲಾಗಿದ್ದ ಆರ್ ಎಸ್‍ಎಸ್ ನಾಯಕರು ಇದೀಗ ದೇಶ ಭಕ್ತರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಕಾಂಗ್ರೆಸ್ ಹೋರಾಟಕ್ಕಿಳಿದಿದ್ದರೆ, ಆರ್ ಎಸ್‍ಎಸ್ ಬ್ರಿಟಿಷರ ಜೊತೆ ಶಾಮೀಲಾಗಿತ್ತು.
ಸ್ವಾತಂತ್ರ್ಯ ಹೋರಾಟ ದಲ್ಲಿ ಆರ್ ಎಸ್‍ಎಸ್, ಬಿಜೆಪಿ ಭಾಗಿ ಆಗರಿಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಭಾಗವಹಿಸಿದವರು ಕಾಂಗ್ರೆಸ್‍ಗೆ ಸೇರಿದವರು ಎಂದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಳ್ಳದವರು ತಮ್ಮನ್ನು ತಾವು (ಆರ್ ಎಸ್‍ಎಸ್, ಬಿಜೆಪಿ) ಸ್ವಾತಂತ್ರ್ಯ ಹೋರಾಟಗಾರೆಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಇಂಥವರಿಂದಲೇ ದೇಶವನ್ನು ಛಿದ್ರವಾಗುತ್ತಿದೆ. ಜನರನ್ನು ದಾರಿ ತಪ್ಪಿಸಲು ಸುಳ್ಳು ಹೇಳಿಕೊಂಡು ರಾಜಕೀಯ ಮಾಡುತ್ತಿರುವ ಬಿಜೆಪಿ ಬುರುಡೆ ಪಕ್ಷ ಎಂದು ಬದರಿಸಿಕೊಳ್ಳುವುದು ಸೂಕ್ತ ಎಂದು ಕಿಡಿ ಕಾರಿದರು.