Breaking News
Home / ರಾಜಕೀಯ / ಕಾಂಗ್ರೆಸ್ & ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರ ಗೆಲ್ಲಲು ಬಿಜೆಪಿ ತಯಾರಿ: ಲಕ್ಷ್ಮಣ ಸವದಿ

ಕಾಂಗ್ರೆಸ್ & ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರ ಗೆಲ್ಲಲು ಬಿಜೆಪಿ ತಯಾರಿ: ಲಕ್ಷ್ಮಣ ಸವದಿ

Spread the love

ಬೆಳಗಾವಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳ ಟಾರ್ಗೆಟ್ ಮಾಡಿದ್ದೇವೆ. ಒಬ್ಬೊಬ್ಬ ಕಾರ್ಯಕರ್ತನಿಗೆ 21 ಮತಗಳ ಜವಾಬ್ದಾರಿ ನೀಡಲಾಗಿದೆ. ರಾಜಕಾರಣದಲ್ಲಿ 51 ಪರ್ಸೆಂಟ್ ನೂರಕ್ಕೆ ಸಮಾನ 49 ಪರ್ಸೆಂಟ್ ಶೂನ್ಯಕ್ಕೆ ಸಮಾನ- ಮಾಜಿ ಡಿಸಿಎಂ ಲಕ್ಷ್ಮಣ ಸವದಿ.

ಚಿಕ್ಕೋಡಿ(ಬೆಳಗಾವಿ): ಕಾಂಗ್ರೆಸ್ ಮತ್ತು ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರಗಳನ್ನು ಪಕ್ಷ ಆಯ್ಕೆ ಮಾಡಿಕೊಂಡಿದ್ದು ಬಿಜೆಪಿ ಗೆಲುವಿಗೆ ಒಬ್ಬೊಬ್ಬ ಕಾರ್ಯಕರ್ತನಿಗೂ ತಲಾ 25 ವೋಟ್​ಗಳನ್ನು ಸೆಳೆಯುವ ಜವಾಬ್ದಾರಿ ನೀಡಲಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

 

ನಗರದಲ್ಲಿ ಸಂಕಲ್ಪ ಸಮಾವೇಶದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಈಗಾಗಲೇ ರಾಜ್ಯದಲ್ಲಿ 100 ಕ್ಷೇತ್ರಗಳನ್ನು ಆಯ್ಕೆ ಮಾಡಿ ಅವುಗಳ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಜೆಡಿಎಸ್ ಹಾಗೂ ಕಾಂಗ್ರೆಸ್ ತೆಕ್ಕೆಯಲ್ಲಿರುವ ಮತ ಕ್ಷೇತ್ರಗಳನ್ನು ಗೆಲ್ಲಲು ಸಂಕಲ್ಪ ಮಾಡಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳ ಟಾರ್ಗೆಟ್ ಮಾಡಿದ್ದೇವೆ. ಒಬ್ಬೊಬ್ಬ ಕಾರ್ಯಕರ್ತನಿಗೆ 21 ಮತಗಳ ಜವಾಬ್ದಾರಿ ನೀಡಲಾಗಿದೆ. ರಾಜಕಾರಣದಲ್ಲಿ 51 ಪರ್ಸೆಂಟ್ ನೂರಕ್ಕೆ ಸಮಾನ 49 ಪರ್ಸೆಂಟ್ ಶೂನ್ಯಕ್ಕೆ ಸಮಾನ ಎಂದರು.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯೆಬೆಳಗಾವಿಯ ಪ್ರತಿ ಕ್ಷೇತ್ರದಲ್ಲೂ ಸಹ ಬಿಜೆಪಿ ಗೆಲ್ಲಿಸುವ ಜವಾಬ್ದಾರಿ ಸವದಿಯವರಿಗೆ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸುತ್ತ, ಯಾವ ಕುದುರೆ ಓಡುತ್ತೋ ಅದಕ್ಕೆ ಜಿದ್ದು ಕಟ್ಟುತ್ತಾರೆ. ಯಮಕನಮರಡಿ, ಚಿಕ್ಕೋಡಿ, ಬೆಳಗಾವಿ ಗ್ರಾಮೀಣ, ಖಾನಾಪುರ ಸೇರಿದಂತೆ ಐದು ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಬೆಳಗಾವಿಯಲ್ಲಿ ನಡೆದ ರಮೇಶ್ ಜಾರಕಿಹೊಳಿ ಹಾಗೂ ಸವದಿ ಜತೆಗೆ ಅರುಣ್ ಸಿಂಗ್ ಪ್ರತ್ಯೇಕ ಸಭೆ ವಿಚಾರಕ್ಕೆ ಮಾಧ್ಯಮಗಳ ಮೇಲೆಯೇ ಸವದಿ ಗರಂ ಆದರು‌. ನಿನ್ನೆ ನನಗೆ ಅಥಣಿಯಲ್ಲಿ ಎರಡು ಸಭೆಗಳು ಇದ್ದವು. ಹೀಗಾಗಿ ನಾನು ಬೆಳಗಾವಿಗೆ ತಡವಾಗಿ ಬಂದಿದ್ದೇನೆ. ಭಾರತೀಯ ಜನತಾ ಪಕ್ಷದ ಛತ್ರದ ಕೆಳಗೆ ಇರ್ತಾರೆ. ಅವರೆಲ್ಲರೂ ನಮ್ಮ ಕುಟುಂಬದ ಸದಸ್ಯರು. ನಾವೆಲ್ಲ ಒಗ್ಗಟ್ಟಾಗಿ ಇದ್ದಿವಿ, ಒಗ್ಗಟ್ಟಾಗಿ ಹೋಗುತ್ತೇವೆ ಎಂದರು.

ಯತ್ನಾಳ್​ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸವದಿ, ಅವರಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಅವರಷ್ಟು ಬುದ್ಧಿವಂತಿಕೆಯೂ ನನ್ನಲ್ಲಿಲ್ಲ. ಅವರು ರಾಜ್ಯ ಮತ್ತು ರಾಷ್ಟ್ರದ ರಾಜಕಾರಣ ಮಾಡಿದವರು. ಅವರ ಬಗ್ಗೆ ನಾನು ಚರ್ಚೆ ಮಾಡೋದು, ಹೇಳಿಕೆ ನೀಡುವುದು ಸಮಂಜಸವಲ್ಲ ಎಂದು ತಿಳಿಸಿದರು.

ಪಂಚಮಸಾಲಿ ಹೋರಾಟದ ಬಗ್ಗೆ ಮುಖ್ಯಮಂತ್ರಿಗಳು ಚಿಂತನೆ ಮಾಡುತ್ತಿದ್ದಾರೆ. ಸಾಮಾಜಿಕ ನ್ಯಾಯ ಕೊಡಬೇಕು ಎನ್ನುವ ಚಿಂತನೆ ಬಗ್ಗೆ ಬಿಜೆಪಿ ನಾಯಕರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದ್ಧರಾಗಿದ್ದಾರೆ ಎಂದರು.


Spread the love

About Laxminews 24x7

Check Also

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

Spread the love ಪಣಜಿ: ಝೋಸ್ಕಾ ಆಯಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದಾಗಿ ಹೇಳಿ ಮಹಿಳೆಯೊಬ್ಬರು 2.71 ಲಕ್ಷ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ