Breaking News

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಯಲ್ಲಿ ಲಕ್ಷಾಂತರ ಜನ ಭಾಗಿ

Spread the love

ಹೊನ್ನಾಳಿ: ನಗರದ ಪೇಟೆ ಹಳದಮ್ಮ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆ ನಿಮಿತ್ತ ಹಮ್ಮಿಕೊಂಡಿದ್ದ ಶೋಭಾಯಾತ್ರೆ ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಭಾನುವಾರ ಅದ್ದೂರಿಯಾಗಿ ನಡೆಯಿತು.

ಮಧ್ಯಾಹ್ನ 12 ಗಂಟೆಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

 

ಮಧ್ಯಾಹ್ನ 12 ಗಂಟೆಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಗಣೇಶನ ಮೂರ್ತಿಯನ್ನು ಅಲಂಕೃತ ವಾಹನದಲ್ಲಿ ಕುಳ್ಳಿರಿಸುತ್ತಿದ್ದಂತೆ ಭಾರಿ ಕರತಾಡನ ಹಾಗೂ ಘೋಷಣೆಗಳು ಮೊಳಗಿದವು. ಆರಂಭದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದ ಮೆರವಣಿಗೆಯು ಮುಖ್ಯರಸ್ತೆಗೆ ಬರುತ್ತಿದ್ದಂತೆ ಸಂಖ್ಯೆ ಹೆಚ್ಚುತ್ತಾ ಹೋಯಿತು. ‘ಗಣಪತಿ ಬಪ್ಪಾ ಮೋರ್ಯ’ ಘೋಷಣೆಗಳು ಮೊಳಗಿದವು. ಮೆರವಣಿಗೆಯಲ್ಲಿ ಹಿಂದೂಪರ ನಾಯಕರ ಹೆಸರುಗಳು ಮತ್ತು
ಜೈಕಾರ ಮೊಳಗಿದವು. ಚಂಡೆ ಮದ್ದಳೆ, ಕೀಲುಕುದುರೆ, ಮಹಿಳೆಯರ ಡೊಳ್ಳು ಕುಣಿತ, ಹಲಗೆಯ ಮೊರೆತ, ಡೊಳ್ಳು ಕುಣಿತ ಸೇರಿ ವಿವಿಧ ಕಲಾತಂಡಗಳ ಕುಣಿತ ಶೋಭಾಯಾತ್ರೆಯ ಮೆರುಗು ಹೆಚ್ಚಿಸಿತ್ತು.

 


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ