Breaking News

ನೀರು ಪೂರೈಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಅನಿಲ ಬೆನಕೆ,

Spread the love

ಬೆಳಗಾವಿ: ಇಲ್ಲಿನ ಸದಾಶಿವ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡದ ಜಲಮಂಡಳಿ ಹಾಗೂ ಎಲ್‌ ಆಯಂಡ್‌ ಟಿ ಕಂಪನಿ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು.

ಸದಾಶಿವ ನಗರದ ಆರಿದ್ರಾ ಗಣೇಶ ಮಂದಿರ ಆವರಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆ, ‘ನೀವೂ ತಪ್ಪು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸಬೇಡಿ.

ನಾಲ್ಕು ದಿನಗಳಿಗೊಮ್ಮೆ ಸಮರ್ಪಕವಾಗಿ ನೀರು ಪೂರೈಸಿ. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ. ಈ ಬಗ್ಗೆ ವರದಿ ಸಲ್ಲಿಸಿ’ ಎಂದು ಸೂಚನೆ ನೀಡಿದರು.

‘ಯುವಸಮೂಹ ಆರೋಗ್ಯಕ್ಕೆ ಒತ್ತು ನೀಡಲು ಅನುಕೂಲವಾಗಲೆಂದು ಇದೇ ಆವರಣದಲ್ಲಿ ವ್ಯಾಯಾಮ ಶಾಲೆ ತೆರೆಯಲಾಗಿದೆ. ಅದರ ಸದುಪಯೋಗ ಪಡಿಸಿಕೊಳ್ಳಿ’ ಎಂದರು. ಜ್ಯೋತಿಬಾ ಪಾಟೀಲ, ವಿನಾಯಕ ಪಾಟೀಲ, ಸಾಗರ ವರ್ಪೆ, ಮನೋಹರ ನಾಯ್ಕ ಇತರರಿದ್ದರು.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ