ಚಿಕ್ಕೋಡಿ(ಬೆಳಗಾವಿ): ಇತ್ತಿಚೆಗೆ ನಿಧನರಾದ ಬೆಳಗಾವಿ ಸಂಸದ ಹಾಗೂ ರಾಜ್ಯ ರೇಲ್ವೆ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ನಿಧನದ ಬೆನ್ನಲ್ಲೇ ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಈಗಾಗಲೇ ಸುರೇಶ್ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಲು ನಳಿನ್ ಕುಮಾರ್ ಭೇಟಿ ನೀಡಿ ಟಿಕೆಟ್ ಸಂಬಂಧಿಸಿದಂತೆ ಅನೌಪಚಾರಿಕ ಸಭೆ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಮುಂಬರುವ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗಾಗಿ ಕಮಲ ನಾಯಕರಲ್ಲಿ ಪೈಪೋಟಿ ಶುರುವಾಗಿದ್ದು, ಈ ಪೈಕಿ ಹಲವು ನಾಯಕರು ಪ್ರಯತ್ನ ಆರಂಭಿಸಿದ್ದಾರೆ. ಮಾಜಿ ಸಂಸದ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿಯವರಿಗೆ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ.
ಕಳೆದ ಲೋಕಸಭೆ ಹಾಗೂ ರಾಜ್ಯಸಭೆ ಟಿಕೆಟ್ ವಂಚಿತರಾಗಿದ್ದಾರೆ. ರಮೇಶ್ ಕತ್ತಿ ಅವರಿಗೆ ಸಿಎಂ ಯಡಿಯೂರಪ್ಪ ಒಳ್ಳೆಯ ಅವಕಾಶ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಕತ್ತಿ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಬೇಕೆಂದು ಅವರ ಅಭಿಮಾನಿಗಳು ಬಿಜೆಪಿ ನಾಯಕರಿಗೆ ಒತ್ತಾಯಿಸಿದ್ದಾರೆ.