Breaking News

ಪುತ್ತೂರು: ಸರಣಿ ಕಳ್ಳತನ ಪ್ರಕರಣ ಅಂತಾರಾಜ್ಯ ಕಳ್ಳನ ಸೆರೆ

Spread the love

ಪುತ್ತೂರು: ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್‌ ನಿವಾಸಿ ಆರೋಪಿ ಮಹಮ್ಮದ್‌ ಕೆ.ಯು. (42)ಬಂಧಿತ ಆರೋಪಿ.

ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಿಸರದ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್‌ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಆರೋಪಿಯು ಕೊಣಾಜೆ, ವಿಟ್ಲ,
ಬಂಟ್ವಾಳ, ಪುಂಜಾಲಕಟ್ಟೆ ಪರಿಸರಗಳಲ್ಲಿ ಕಳ್ಳತನ ನಡೆಸಿರುವುದು ವಿಚಾ ರಣೆಯ
ವೇಳೆ ಬೆಳಕಿಗೆ ಬಂದಿದೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯ ದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ.


Spread the love

About Laxminews 24x7

Check Also

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

Spread the love ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ