Breaking News
Home / ಜಿಲ್ಲೆ / ಬೆಳಗಾವಿ / ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮ; ಇತ್ತ ಜಾಮೀನು- ಅತ್ತ ಬಂಧನ

ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮ; ಇತ್ತ ಜಾಮೀನು- ಅತ್ತ ಬಂಧನ

Spread the love

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲ 20 ಮಂದಿಗೂ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಗೋಕಾಕದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜಿ.

 

ಪ್ರಕರಣದ ವಿಚಾರಣೆ ನಡೆಸಿದ ಗೋಕಾಕದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜಿ. ರಾಜೀವ್‌ ಅವರು ಪ್ರಮುಖ ಆರೋಪಿ ಸಂಜೀವ ಭಂಡಾರಿ ಸೇರಿ ಎಲ್ಲರಿಗೂ ಜಾಮೀನು ನೀಡಿದರು.

ಗೋಕಾಕ ನಗರದ ಜಿಎಸ್‌ಎಸ್ ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್‌ 7ರಂದು ಈ ಪರೀಕ್ಷೆ ನಡೆದಿತ್ತು. ಅಭ್ಯರ್ಥಿಯೊಬ್ಬ ಸ್ಮಾರ್ಟ್‌ವಾಚ್‌ ಬಳಸಿ ಪ್ರಶ್ನೆ ಪತ್ರಿಕೆ ಫೋಟೊ ತೆಗೆಯುತ್ತಿರುವುದನ್ನು ಇನ್ನೊಬ್ಬ ಅಭ್ಯರ್ಥಿ ಪೊಲೀಸರಿಗೆ ತಿಳಿಸಿದ್ದರು. ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಪೊಲೀಸರಿಗೆ ಅಕ್ರಮ ನಡೆದಿದ್ದು ಖಾತ್ರಿಯಾಗಿತ್ತು.

ಸ್ಮಾರ್ಟ್‌ವಾಚ್‌ ಬಳಸಿದ ಅಭ್ಯರ್ಥಿ ಸಿದ್ದಪ್ಪ ಕೆಂಚಪ್ಪ ಮದಿಹಳ್ಳಿಯನ್ನು ಪೊಲೀಸರು ಆಗಸ್ಟ್‌ 10ರಂದು ಬಂಧಿಸಿದ್ದರು. ಆಗಸ್ಟ್‌ 23ರಂದು ಏಕಕಾಲಕ್ಕೆ 9 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು. ಆಗಸ್ಟ್‌ 25ರಂದು ಪರೀಕ್ಷೆಯ ಪ್ರಶ್ನೆಗಳಿಗೆ ಉತ್ತರಗಳನ್ನು ಸಿದ್ಧಪಡಿಸಿದ ಮೂವರನ್ನು ಸೆರೆ ಸಿಕ್ಕಿದ್ದರು.

ಇಷ್ಟೆಲ್ಲ ಆದರೂ ‘ಕಿಂಗ್‌ಪಿನ್‌’ ಸಂಜೀವ ಭಂಡಾರಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಸೆ. 3ರಂದು ಹುಬ್ಬಳ್ಳಿ- ಧಾರವಾಡ ಕಮಿಷನರೇಟ್‌ ವ್ಯಪ್ತಿಯಲ್ಲಿ ಅವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.

ಸಂಜೀವ ಭಂಡಾರಿ ಬಂಧನದ ಮೂಲಕ ಪ್ರಕರಣ ಮ‌ಷ್ಟು ಆಳಕ್ಕೆ ಹೋಯಿತು. ಇದೇ ವ್ಯಕ್ತಿ ಈ ಹಿಂದೆ ನಡೆದಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆಯಲ್ಲೂ ಸ್ಮಾರ್ಟ್‌ವಾಚ್‌ ಬಳಸುವ ತಂತ್ರ ಮಾಡಿ, ಅಕ್ರಮ ಎಸಗಿದ್ದ. ಜಾಮೀನು ಮೇಲೆ ಹೊರಬಂದಿದ್ದ ಆರೋಪಿ ಮತ್ತೆ ಅದೇ ಮಾದರಿಯ ಅಕ್ರಮಕ್ಕೆ ಕೈ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೀವ ಬಂಧನದ ಬಳಿಕ ಒಬ್ಬೊಬ್ಬರಾಗಿ ಒಟ್ಟು 20 ಮಂದಿ ಸೆರೆ ಸಿಕ್ಕರು.

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಮುಖ ಆರೋಪಿ ಸಂಜೀವ ಭಂಡಾರಿ, ಜಾಮೀನು ಪಡೆದು ಹೊರಬರುತ್ತಿದ್ದಂತೆಯೇ ಸಿಐಡಿ ಅಧಿಕಾರಿಗಳು ಬಂಧಿಸಿದರು.

ಈ ಪ್ರಕರಣದ ‘ಕಿಂಗ್ ಪಿನ್’ ಸಂಜೀವ ಅವರನ್ನು ಸೆ.3ರಂದು ಬಂಧಿಸಲಾಗಿತ್ತು.

ಸಂಜೀವ ಸೇರಿದಂತೆ ಎಲ್ಲ 20 ಆರೋಪಿಗಳೂ ಇಲ್ಲಿನ ಹಿಂಡಲಗಾ ಜೈಲಿನಲ್ಲಿದ್ದರು. ಸೋಮವಾರ ಇವರ ಅರ್ಜಿ ವಿಚಾರಣೆ ನಡೆಸಿದ ಗೋಕಾಕದ 2ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಸಂಜೀವ ಜಾಮೀನು ಪಡೆದು ಜೈಲಿನಿಂದ ಹೊರ ಬರುತ್ತಿದ್ದಂತೆ ಸಿಐಡಿ ಅಧಿಕಾರಿಗಳು ಅವರನ್ನು ಬಂಧಿಸಿದರು. ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಯನ್ನು ಆರು ದಿನಗಳವರೆಗೆ ಸಿಐಡಿ ಕಸ್ಟಡಿಗೆ ನೀಡಲಾಗಿದೆ.

2021ರಲ್ಲಿ ನಡೆದ ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲೂ ಸಂಜೀವ ಅಕ್ರಮ ಎಸಗಿರುವ ಆರೋಪದಲ್ಲಿ ಜೈಲು ಸೇರಿದ್ದ. ಜಾಮೀನಿನ ಮೇಲೆ ಹೊರಬಂದು ಮತ್ತೆ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಕೂಡ ಅಭ್ಯರ್ಥಿಗಳಿಗೆ ಸ್ಮಾರ್ಟ್ ವಾಚ್ ನೀಡಿ ಅಕ್ರಮ ಎಸಗುವ ಡೀಲ್ ಮಾಡಿದ ಆರೋಪ ಅವರ ಮೇಲಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ