Breaking News

ಗರ್ಭಕೋಶಕ್ಕೆ ಕತ್ತರಿ ಪ್ರಕರಣ: ಸಂತ್ರಸ್ತ ಮಹಿಳೆಯರಿಂದ ಅಹೋರಾತ್ರಿ ಧರಣಿ

Spread the love

ಹಾವೇರಿ: ಅನಧಿಕೃತವಾಗಿ ಗರ್ಭಕೋಶದ ಚಿಕಿತ್ಸೆಗೊಳಗಾಗಿದ್ದ ಮಹಿಳೆಯರು ‘ವಿಶೇಷ ಆರ್ಥಿಕ ಪ್ಯಾಕೇಜ್’ ಘೋಷಿಸುವಂತೆ ಆಗ್ರಹಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಅಹೋರಾತ್ರಿ ಧರಣಿ ನಡೆಸಿದರು.

ರಾಣೆಬೆನ್ನೂರಿನ ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿಯಾಗಿದ್ದ ಡಾ.ಪಿ.

ಶಾಂತ ಅವರು 1522 ಬಡ ಮಹಿಳೆಯರ ಗರ್ಭಕೋಶವನ್ನು ಅನಧಿಕೃತವಾಗಿ ತೆಗೆದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಗರ್ಭಕೋಶ ತೆಗೆದಿರುವ ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನೂರಾರು ಮಹಿಳೆಯರು ಆಗ್ರಹಿಸಿದರು.

ಕಳೆದ ಏಪ್ರಿಲ್ ತಿಂಗಳಲ್ಲಿ ರಾಣೆಬೆನ್ನೂರಿನಿಂದ ಶಿಗ್ಗಾವಿಯ ಸಿಎಂ ಮನೆವರೆಗೆ ಪಾದಯಾತ್ರೆ ಆಯೋಜಿಸಲಾಗಿತ್ತು. ಹಾವೇರಿ ಸಮೀಪದ ನೆಲೋಗಲ್ಲವರೆಗೆ ಪಾದಯಾತ್ರೆ ಬರುತ್ತಿದ್ದಂತೆ, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಸಿ ಪರಿಹಾರ ಕೊಡಿಸುವ ಭರವಸೆಯನ್ನು ಜಿಲ್ಲಾಡಳಿತ ನೀಡಿತ್ತು. ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ ಪ್ರತಿಭಟನಾಕಾರರು ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ಆದರೆ, ನೆಲೋಗಲ್ಲ ಬಳಿಯಿಂದ ಪಾದಯಾತ್ರೆ ಆರಂಭಿಸಲು ಪೊಲೀಸರು ಅವಕಾಶ ನೀಡದ ಕಾರಣ ಜಿಲ್ಲಾಡಳಿತ ಭವನದ ಎದುರು ಧರಣಿ ಆರಂಭಿಸಿದರು.

ಪರಿಹಾರಕ್ಕೆ ಪಟ್ಟು

ಪ್ರತಿಭಟನೆ ನೇತೃತ್ವ ವಹಿಸಿರುವ ಶಿವಪುತ್ರಪ್ಪ ಮಲ್ಲಾಡದ ಮಾತನಾಡಿ, ರಾಣೆಬೆನ್ನೂರಿನ ತಾಲ್ಲೂಕು ಆಸ್ಪತ್ರೆ ವೈದ್ಯರಾಗಿದ್ದ ಡಾ.ಪಿ.ಶಾಂತ ಅವರ ಹಣದಾಸೆಗೆ ಸಾವಿರಾರು ಮಹಿಳೆಯರು ಬೀದಿಗೆ ಬಂದಿದ್ದಾರೆ. 1552 ಮಹಿಳೆಯರಿಗೆ ಅನಧಿಕೃತವಾಗಿ ಗರ್ಭಕೋಶದ ಚಿಕಿತ್ಸೆ ಮಾಡಿದ್ದರು. ಈ ಮಹಿಳೆಯರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಪರಿಹಾರ ಸಿಕ್ಕಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ