Breaking News

ಸರಕಾರ, ಲೋಕಾಯುಕ್ತಕ್ಕೆ ಹೈಕೋರ್ಟ್‌ ನೋಟಿಸ್‌

Spread the love

ಬೆಂಗಳೂರು: ಲೋಕಾಯುಕ್ತದಲ್ಲಿ ದಾಖಲಾಗುವ ಎಫ್‌ಐಆರ್‌ಗಳನ್ನು 24 ಗಂಟೆಯೊಳಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರಕಾರ ಹಾಗೂ ಲೋಕಾಯುಕ್ತಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

 

ಈ ವಿಚಾರವಾಗಿ ವಕೀಲ ಎಸ್‌. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಲೋಕಾಯುಕ್ತ ಎಡಿಜಿಪಿಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನ. 9ಕ್ಕೆ ಮುಂದೂಡಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ