Breaking News
Home / new delhi / ರಫೇಲ್‌ ಡೀಲ್‌ – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

ರಫೇಲ್‌ ಡೀಲ್‌ – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

Spread the love

ನವದೆಹಲಿ: ರಕ್ಷಣಾ ವ್ಯವಹಾರದ ವೇಳೆ ಈಗ ಇದ್ದ ಆಫ್‌ಸೆಟ್‌ ನಿಯಮವನ್ನೇ ಕೈಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

36 ರಫೇಲ್ ಯುದ್ಧ ವಿಮಾನ ಸಂಬಂಧ 59 ಸಾವಿರ ಕೋಟಿ ರೂ. ಒಪ್ಪಂದ ನಡೆದು 5 ವಿಮಾನ ಭಾರತಕ್ಕೆ ಬಂದರೂ ಡಸಾಲ್ಟ್ ಕಂಪನಿ ತನ್ನ ಆಫ್‍ಸೆಟ್ ನಿಯಮ ಪಾಲನೆ ಮಾಡಿಲ್ಲ ಎಂದು ಮಹಾಲೇಖಪಾಲರ(ಸಿಎಜಿ) ವರದಿ ಉಲ್ಲೇಖಿಸಿತ್ತು. ಸಂಸತ್ತಿನಲ್ಲಿ ಸಿಎಜಿ ವರದಿ ಮಂಡನೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ರಕ್ಷಣಾ ಖರೀದಿ ನಿಯಮಗಳಿಗೆ ಬದಲಾವಣೆ ಮಾಡಿದೆ.

ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ವಿಶೇಷ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕ (ಸ್ವಾಧೀನ) ಅಪೂರ್ವ ಚಂದ್ರ ಅವರು, ನಾವು ಆಫ್‌ಸೆಟ್ ಮಾರ್ಗಸೂಚಿಗಳಲ್ಲಿ ಬದಲಾವಣೆಗಳನ್ನು ಮಾಡಿದ್ದೇವೆ. ಈಗ ಸರ್ಕಾರದಿಂದ ಸರಕಾರದ ನಡುವೆ ಮತ್ತು ಒಂದೇ ಕಂಪನಿಯಿಂದ ರಕ್ಷಣಾ ಸಾಮಾಗ್ರಿ ಖರೀದಿ ವೇಳೆ ಆಫ್‌ಸೆಟ್‌ ನಿಯಮಗಳು ಇರುವುದಿಲ್ಲ ಎಂದು ಎಂದು ತಿಳಿಸಿದ್ದಾರೆ.

ಈ ನಿಯಮಗಳು ಖರೀದಿಗೆ ಅಡ್ಡಿಯಾಗುತ್ತದೆ ಮತ್ತು ಯಾವುದೇ ಉದ್ದೇಶವನ್ನು ಸಾಧಿಸುತ್ತಿಲ್ಲ. ಹೀಗಾಗಿ ನಿಯಮವನ್ನು ಬದಲಾವಣೆ ಮಾಡಲಾಗಿ ಎಂದು ಸರ್ಕಾರ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ