Breaking News
Home / ರಾಜಕೀಯ / ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ

ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ

Spread the love

ನವದೆಹಲಿ: 24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್‌ (Congress) ಪಕ್ಷದ ಸಾರಥಿಯಾಗಿದ್ದಾರೆ.

ರಾಜ್ಯಸಭೆಯ ಪ್ರತಿಪಕ್ಷದ ನಾಯಕನಾಗಿದ್ದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಎಐಸಿಸಿ (AICC) ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಹೊಸ ಅಧ್ಯಕ್ಷರ ಆಯ್ಕೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ನೂತನ ಸಾರಥಿಯಾಗಿದ್ದಾರೆ.

ಎಐಸಿಸಿ (AICC) ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್‌ (Shashi Tharoor) 1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿ ತೀವ್ರ ಮುಖಭಂಗಕ್ಕೀಡಾಗಿದ್ದಾರೆ.


Spread the love

About Laxminews 24x7

Check Also

ಬಾಡಿ ಬಿಲ್ಡ್ ಮಾಡಿ ಯುವತಿಯರ ಮುಂದೆ ಪ್ರದರ್ಶಿಸುತ್ತಿದ್ದ ಯುವಕನಿಗೆ ಪೊಲೀಸರ ವರ್ಕೌಟ್

Spread the loveಬೆಳಗಾವಿ: ಜಿಮ್ ಹೋಗೋದು, ವ್ಯಾಯಾಮ, ಕಸರತ್ತು ಮಾಡಿ ದೇಹವನ್ನು ಸಾಮು ಮಾಡಿಕೊಳ್ಳುವುದು ತಪ್ಪಲ್ಲ. ಅದರೆ ನಾನು ದೇಹವನ್ನು ಸಾಮು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ