ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ. ಜೊತೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಧನ್ಯವಾದ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಎಐಸಿಸಿ ಅಧ್ಯಕ್ಷರಾಗಿ ಕನ್ನಡಿಗ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ತಮ್ಮ ಆಯ್ಕೆ ಘೋಷಣೆ ಆಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ.
ದೇಶಾದ್ಯಂತ ಪಕ್ಷವನ್ನು ಸಂಘಟಿಸಲು ಮತ್ತಷ್ಟು ಪ್ರಯತ್ನಿಸುವೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುತ್ತೆ. ಯುವ ನಾಯಕರು, ಹಿರಿಯ ನಾಯಕರ ಜತೆಗೂಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.ಪಕ್ಷದ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುತ್ತೇನೆ. ಯಾತ್ರೆಗೆ ಜನರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ.