ಹೈಸ್ಕೂಲ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ನಿನ್ನೆ ರಾತ್ರಿ ವಿದ್ಯಾರ್ಥಿಯನ್ನು ಕೊಲೆ ಮಾಡಿ ಮುಚ್ಚಂಡಿ ಗ್ರಾಮದ ಹೊರಭಾಗದಲ್ಲಿ ಹಂತಕರು ಎಸೆದು ಹೋಗಿದ್ದಾರೆ. ಬೆಳಗಾವಿಯ ಛತ್ರಪತಿ ಶಿವಾಜಿ ನಗರದ ಪ್ರಜ್ವಲ್ ಶಿವಾನಂದ ಕರಿಗಾರ ಕೊಲೆಯಾದ ವಿದ್ಯಾರ್ಥಿ. ನಗರದ ಜಿ.ಎ.ಹೈಸ್ಕೂಲ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿ.
ವಿದ್ಯಾರ್ಥಿಯ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ. ಬೆಳಗಾವಿಯ ಜಿಎ ಹೈಸ್ಕೂಲಿನಲ್ಲಿ10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಎಂದು ಹೇಳಲಾಗುತ್ತಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಅರೆ ಬೆತ್ತಲೆ ಅವಸ್ಥೆಯಲ್ಲಿ ಮೃತ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7