Breaking News

ತೋಟದ ರಸ್ತೆಯಲ್ಲಿ ಯಮಸ್ವರೂಪಿ‌ ತಗ್ಗಗುಂಡಿಗಳು

Spread the love

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಶಿಂಧೆ ತೋಟದ ರಸ್ತೆಗಳು ಹದಗೆಟ್ಟು ಹೋಗಿವೆ.ರಸ್ತೆಗಳು ಹದಗೆಟ್ಟ ಪರಿಣಾಮ ಗ್ರಾಮದ ಶಿಂಧೆ ತೋಟದ ಸುಮಾರು 30 ಮನೆಗಳು ಸಂಪರ್ಕ ಕಡಿತವಾಗಿವೆ.

ಮಳೆಗಾಲ ಪ್ರಾರಂಭವಾದರೆ ಸಾಕು ಶಿಂಧೆ ತೋಟದ ಜನರ ಪರಿಸ್ಥಿತಿ ಹೇಳತೀರದಾಗಿದೆ. 2 ಅಡಿಯಷ್ಟು ದೊಡ್ದ ದೊಡ್ಡ ಗುಂಡಿಗಳು,ಆ ಗುಂಡಿಗಳಲ್ಲಿ ನೀರು ಸಂಗ್ರಹ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಇದರಿಂದಾಗಿ ದಿನಪ್ರತಿ ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ ಜಾರಿ ಬೀಳುವುದು ಸಹಜವಾಗಿದೆ. ಮಹಿಳೆಯರು, ವೃಧ್ಧರು ರಸ್ತೆ ಮೇಲೆ ಸಂಚರಿಸಲು ಪರದಾಡುವ ದುಸ್ಥಿತಿ ನಿರ್ಮಾಣವಾಗಿದೆ.

ಈ ಹದಗೆಟ್ಟ ರಸ್ತೆಯಿಂದಾಗಿ ಶಿಂಧೆ ತೋಟದ ಮನೆಗಳಿಗೆ ಬೇರೆ ಊರುಗಳಿಂದ ಬರುವ ಸಂಬಂಧಿಕರು, ಅತಿಥಿಗಳು ಈ ರಸ್ತೆಯಲ್ಲಿನ ಗುಂಡಿಗಳನ್ನು ನೋಡಿ ಮತ್ತೆ ವಾಪಸ್ಸ ಹೋಗುತ್ತಿದ್ದಾರೆ ಎಂದು ಶಿಂಧೆ ತೋಟದ ಜನರು‌ ಅಳಲುತೋಡಿಕೊಳ್ಳುತ್ತಿದ್ದಾರೆ. ಶಾಸಕ ದುರ್ಯೋಧನ ಐಹೊಳೆಯವರು ಈ ರಸ್ತೆ ಬಗ್ಗೆ ಗಮನಹರಿಸಿ ರಸ್ತೆ ನಿರ್ಮಾಣ ಮಾಡಿಕೊಡಿ ಎಂದು ಶಿಂಧೆ ತೋಟದ ಜನರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ