Breaking News
Home / Uncategorized / ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳ ಬಂಧನ

ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳ ಬಂಧನ

Spread the love

ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೌದು, ಬಿಜಾಪುರದಿಂದ ಖೋಟಾ ನೋಟು ಚಲಾವಣೆ ಮಾಡಲು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿರುವ ಕುರಿತಂತೆ ಖಚಿತ ಮಾಹಿತಿ ಮೇಲೆ
ಉಪನಗರ ಪೊಲೀಸರು ಲಾಡ್ಜ್ ಮೇಲೆ ದಾಳಿ ಮಾಡಿದ್ದು, ದಾಳಿಯ ಸಮಯದಲ್ಲಿ ಮೂವರು ಆರೋಪಿಗಳು ಸಿಕ್ಕಿ ಬಿದ್ದು ಒಬ್ಬ ಆರೋಪಿ ಪರಾರಿ ಆಗಿದ್ದಾನೆ.

ಇನ್ನು ಬಂದಿತರಿಂದ 200 ರೂ ಮುಖ ಬೆಲೆಯ 129 ಖೋಟಾ ನೋಟು ..100 ರೂ ಮುಖ ಬೆಲೆಯ 77 ಖೋಟಾ ನೋಟು ಹಾಗೂ ಯುನಿಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಒಂದು ಡಾಲರ್ ಹಾಗೂ ಅದಕ್ಕೆ ಸಂಬಂಧಪಟ್ಟ ಸರ್ಟಿಫಿಕೇಟ್ ಮತ್ತು 100 ರೂ ಮುಖ ಬೆಲೆಯ 20 ಅಸಲಿ ನೋಟುಗಳು ಒಂದು ಪ್ರಿಂಟರ್ ಮಷಿನ್ 4 ಬಣ್ಣದ ಡಬ್ಬಿಗಳನ್ನು ವಶಪಡಿಸಿಕೊಂಡಿರುತ್ತಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಗುರುರಾಜ ಕಲ್ಲಯ್ಯ ಪಟ್ಟದ ಮಠ . ಶಿವಾನಂದ್ ಕಾರಜೋಳ್ ಹಾಗೂ ಮಾಸಪತ್ರಿಕೆ ಕನ್ನಡ ಚಂದ ಪತ್ರಕರ್ತ ಹಾಗೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ದತ್ತಾತ್ರೇಯ ಕುಂಬಾರ್ ಈ ನಾಲ್ಕು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಆರೋಪಿಗಳನ್ನು ನ್ಯಾಯಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.


Spread the love

About Laxminews 24x7

Check Also

ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Spread the loveಬೆಳಗಾವಿ: ಬಿರು ಬೇಸಿಗೆಯಲ್ಲೂ ಸುಪ್ರಸಿದ್ಧ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಫಾಲ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ