ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರಿನಲ್ಲಿದ್ದ ದಂಪತಿಗಳನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬೆಳಗಾವಿಯಿಂದ ಸ್ವಗ್ರಾಮ ಧೂಪದಾಳಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದ ದಂಪತಿ ಸಿದ್ದಪ್ಪ ಕೊಣ್ಣೂರ ಹಾಗೂ ಅವರ ಪತ್ನಿ ಸೀಮಾ ಕೊಣ್ಣೂರ ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕಾರು ಹಳ್ಳದಲ್ಲಿ ಬೀಳುತ್ತಿದ್ದಂತೆ ಕಾರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು.
ಈ ವೇಳೆ ಅಲ್ಲಿದ್ದ ಸ್ಥಳೀಯರ ಸಮಯಪ್ರಜ್ಞೆಯಿಂದ ಈ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಂಕಲಗಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಂಕಲಗಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.