ಮೈಸೂರು: ವಿಧಾನಸಭಾ ಚುವಾಣೆಗೆ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯುತ್ತಿದ್ದರೆ. ಇತ್ತ ಕಾಂಗ್ರೆಸ್ ಕೂಡ ಭಾರತ್ ಜೋಡೋ ಯಾತ್ರೆ ಮೂಲಕ ಸಂಚಲನ ಮೂಡಿಸುತ್ತಿದೆ.
ಇದೀಗ ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ಧತೆ ನಡೆಸಲಾಗಿದೆ. ಹೀಗಾಗಿ ಕೆಲ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ.ಜೆಡಿಎಸ್ ತೊರೆಯಲು ಮುಂದಾಗಿದ್ದ ಹಿರಿಯ ಶಾಸಕ ಜಿ.ಟಿ ದೇವೇಗೌಡರನ್ನು ಮನವೊಲಿಕೆ ಮಾಡುವಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಯಶಸ್ವಿಯಾಗಿದ್ದು, ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮತ್ತೆ ತನ್ನ ಕೋಟೆ ಭದ್ರಪಡಿಸಿಕೊಳ್ಳಲು ಕಸರತ್ತು ನಡೆಸಿದೆ.
ಅಲ್ಲದೇ ಮೈಸೂರು ಭಾಗದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ ದೇವೇಗೌಡ ಹಾಗೂ ಹುಣಸೂರು ಕ್ಷೇತ್ರದಿಂದ ಜಿಟಿಡಿ ಪುತ್ರ ಹರೀಶ್ ಗೌಡ ಅವರಿಗೆ ಜೆಡಿಎಸ್ ಟಿಕೆಟ್ ಘೋಷಣೆ ಮಾಡಲಾಗಿದೆ.
Laxmi News 24×7