ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಭವ್ಯ ಪ್ರತಿಮೆ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಲಿದೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳು ಬಳಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ–Sಣಚಿಣue oಜಿ Pಡಿosಠಿeಡಿiಣಥಿ ಅನಾವರಣದ ಪ್ರಯುಕ್ತ ನಾಡಿನಾದ್ಯಂತ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಸಿಎಂ ಬೊಮ್ಮಯಿ ಅವರು ಚಾಲನೆ ಕೊಟ್ಟರು.
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11ರಂದು ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅ.21ರಿಂದ ನವೆಂಬರ್ 7ರವರೆಗೆ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ ನಡೆಯಲಿದೆ. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ನಮ್ಮ ದೇಶ ಹತ್ತು ಹಲವಾರು ಪ್ರಭುಗಳನ್ನು, ಸಾಮ್ರಾಜ್ಯಗಳನ್ನು ಕಂಡಿದೆ. ಬೇರೆ ರಾಜ್ಯಗಳ ರಾಜರುಗಳಲ್ಲಿ ಹೆಚ್ಚಿನವರು ಯುದ್ಧದಲ್ಲಿ, ಸಾಮ್ರಾಜ್ಯ ವಿಸ್ತರಣೆಯಲ್ಲಿ ಸಮಯ ಕಳೆದರು. ಆದರೆ ಕರ್ನಾಟಕದ ಇತಿಹಾಸ ವಿಭಿನ್ನವಾಗಿದೆ.