ಪೊಲೀಸ್ ಸಂಸ್ಮರಣಾ ದಿನಾಚರಣೆ ಅಂಗವಾಗಿ ಹುತಾತ್ಮ ಪೊಲೀಸರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪುಷ್ಪನಮನ ಸಲ್ಲಿಸಿದರು.
ಅಕ್ಟೋಬರ್ 21 ಪೊಲೀಸ್ ಹುತಾತ್ಮ ದಿನ ಹಿನ್ನೆಲೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ನಗರ ಮೀಸಲು ಪಡೆ ಕೇಂದ್ರ ಸ್ಥಾನದಲ್ಲಿ ಹುತಾತ್ಮರಾದ ಪೊಲೀಸರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುತಾತ್ಮ ಪೊಲೀಸರಿಗೆ ಪುಷ್ಪ ಗುಚ್ಚ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಪೊಲೀಸ್ ಮಹಾ ನಿರ್ದೇಶಕ ಪ್ರವಿಣ್ ಸೂದ್ ಹಾಜರಿದ್ದರು. ಇದೇ ವೇಳೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಅಪಘಾತಕ್ಕೀಡಾಗಿದ್ದ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಪೊಲೀಸ್ ಪೇದೆ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ತಿಕ್ಕಲಕಿ ಗ್ರಾಮದ ಹುತಾತ್ಮ ಪೆÇಲಿಸ್ ಪೇದೆ ಅನಿಲ್ ಮುಲಿಕ್ ಅವರ ತಂದೆ ದಾಜಿಬಾ, ತಾಯಿ ಶಾಂತಾಬಾಯಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುತಾತ್ಮರ ಕುಟುಂಬಕ್ಕೆ ಸಾಂತ್ವನ ಹೇಳಿ, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.