Breaking News

ಬಡ ಪೋಷಕರ ಜೇಬಿಗೆ ಸರ್ಕಾರದ ಕತ್ತರಿ: ಸಿದ್ದರಾಮಯ್ಯ

Spread the love

ಬೆಂಗಳೂರು: ಕಮಿಷನ್‌ ಹೆಸರಿನಲ್ಲಿ ರಾಜ್ಯದ ಖಜಾನೆ ಲೂಟಿ ಮಾಡಿದ ಬಿಜೆಪಿ ಸರ್ಕಾರ, ಈಗ ದೇಣಿಗೆ ನೆಪದಲ್ಲಿ ಬಡ ಮಕ್ಕಳ ಪೋಷಕರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಪೋಷಕರಿಂದ ಶಾಲಾಭಿವೃದ್ಧಿಗೆ ದೇಣಿಗೆ ಸಂಗ್ರಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವ ಕುರಿತು ಟ್ವಿಟರ್‌ನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿರುವ ಅವರು, ‘ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ.

ಬಿಜೆಪಿ ಸರ್ಕಾರಕ್ಕೆ ಇಂಥ ದೈನೇಸಿ ಸ್ಥಿತಿ ಬರಬಾರದಿತ್ತು’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ನಾವು ವಿದ್ಯಾರ್ಥಿಗಳಿಗೆ ನೀಡಿದ್ದ ಹಾಲು, ಬಿಸಿಯೂಟ, ಸಮವಸ್ತ್ರ, ಶೂ, ವಿದ್ಯಾಸಿರಿ, ಹಾಸ್ಟೆಲ್‌ ಸೌಲಭ್ಯಗಳನ್ನು ಒಂದೊಂದಾಗಿ ಕಿತ್ತುಕೊಳ್ಳುತ್ತಿರುವ ಬಿಜೆಪಿ ಸರ್ಕಾರ, ಈಗ ಅವರಿಂದ ದುಡ್ಡು ಕಿತ್ತುಕೊಳ್ಳಲು ಹೊರಟಿದೆ. ವೇದಿಕೆ ಮೇಲೆ ನಿಂತು ಧಮ್‌,
ತಾಕತ್‌ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿ
ಗಳ ನೆರವಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್‌ ತೋರಿಸಲಿ’ ಎಂದು


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ