ಬಿಜೆಪಿಯ ಹಿರಿಯ ನಾಯಕರ ಆರಂಭಿಕ ವಿಶ್ಲೇಷಣೆಯ ಪ್ರಕಾರ, ದಲಿತರಾದ ಖರ್ಗೆ ಅವರು ಪಕ್ಷದ ಉನ್ನತ ಹಂತವನ್ನು ತಲುಪಿರುವುದರಿಂದ ದಲಿತ ಮತಗಳು, ವಿಶೇಷವಾಗಿ ಪರಿಶಿಷ್ಟ ಜಾತಿಗಳು ಕ್ರೋಢೀಕರಿಸಲ್ಪಟ್ಟು ಕಾಂಗ್ರೆಸ್ ಪರವಾಗಿ ಹೋಗಬಹುದು. ಬೆಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಮುಳುಗುತ್ತಿರುವ ದೋಣಿಯ ಕ್ಯಾಪ್ಟನ್ ಮಾತ್ರ ಎಂದು ಬಿಜೆಪಿ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದರೂ ಒಳಗೊಳಗೆ ತಳಮಳ ಆರಂಭವಾಗಿದೆ, ಹೀಗಾಗಿ ಅದು ಸಮಾಜದ ವಿವಿಧ ವರ್ಗಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ.
ಬಿಜೆಪಿಯ ಹಿರಿಯ ನಾಯಕರ ಆರಂಭಿಕ ವಿಶ್ಲೇಷಣೆಯ ಪ್ರಕಾರ, ದಲಿತರಾದ ಖರ್ಗೆ ಅವರು ಪಕ್ಷದ ಉನ್ನತ ಹಂತವನ್ನು ತಲುಪಿರುವುದರಿಂದ ದಲಿತ ಮತಗಳು, ವಿಶೇಷವಾಗಿ ಪರಿಶಿಷ್ಟ ಜಾತಿಗಳು ಕ್ರೋಢೀಕರಿಸಲ್ಪಟ್ಟು ಕಾಂಗ್ರೆಸ್ ಪರವಾಗಿ ಹೋಗಬಹುದು. ಕಲ್ಯಾಣ ಕರ್ನಾಟಕದ ಯಾವೊಬ್ಬ ನಾಯಕರೂ ಮತದಾರರ ಮೇಲೆ ಪ್ರಭಾವ ಬೀರುವಷ್ಟು ನಿರೀಕ್ಷಿತ ಮಟ್ಟಕ್ಕೆ ಬೆಳೆದಿಲ್ಲ ಎಂಬುದು ಬಿಜೆಪಿ ವರಿಷ್ಠರ ಆತಂಕಕ್ಕೆ ಕಾರಣವಾಗಿರುವ ಇನ್ನೊಂದು ಅಂಶ. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮದೇ ಆದ ಅನುಯಾಯಿಗಳು, ಹಿತೈಷಿಗಳು, ಅಭಿಮಾನಿಗಳ ದಂಡನ್ನು ಹೊಂದಿದ್ದು, ಈ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಿದ 371 ಜೆ ಕಲಂಗೆ ತಿದ್ದುಪಡಿ ತರುವುದು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ (ಬೆಳಗಾವಿ ಪ್ರದೇಶ) ಲಿಂಗಾಯತರು ಮತ್ತು ವೀರಶೈವರ ಭದ್ರಕೋಟೆ ಎಂದು ಪರಿಗಣಿಸಲಾಗಿದೆ, ಕುರುಬರು ಮತ್ತು ದಲಿತರು ಸೇರಿದಂತೆ ಹಿಂದುಳಿದ ವರ್ಗಗಳು ಇಲ್ಲಿ ಮೇಲ್ಮೈ ಸಾಧಿಸಿವೆ.