ರಾಮದುರ್ಗ: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ಇಲ್ಲಿನ ಸುಶೀಲಾತಾಯಿ ಕುಲಗೋಡ ಪಿಯು ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಸನಗೌಡಾ ದ್ಯಾಮನಗೌಡ್ರ-ಕಬಡ್ಡಿ, ವಿಜಯ ಕಳಸಗೌಡರ-5 ಕಿ.ಮೀ ನಡಿಗೆ ಮತ್ತು ಸಾನೀಯಾ ನಾಸಿಪೂರ ಜಾವಲಿನ್ ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷ ಎಸ್.ಎ. ಶೆಟ್ಟಿಸದಾವರ್ತಿ, ಉಪಾಧ್ಯಕ್ಷ ಕೆ.ಮೋಹನ, ಗೌರವ ಕಾರ್ಯದರ್ಶಿ ಎಸ್.ಎಸ್. ಸುಲ್ತಾನಪೂರ, ಪ್ರಾಚಾರ್ಯ ಪ್ರೊ.ಎಂ.ಬಿ. ಪಾಟೀಲ, ದೈಹಿಕ ಶಿಕ್ಷಣ ನಿರ್ದೇಶಕ ಬಿ.ಬಿ. ಕಬಾಡಗಿ ಅಭಿನಂದಿಸಿದ್ದಾರೆ.