Breaking News

ಆನಂದ ಮಾಮನಿ ಅವರ ಅಂತಿಮ ದರ್ಶನವನ್ನು ಪಡೆದುಕೊಂಡ C.M.

Spread the love

ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾದ ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ ಅವರ ಅಂತಿಮ ದರ್ಶನವನ್ನು ಪಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸರಕಾರದ ಪರವಾಗಿ ಅಂತಿಮ ನಮನ ಸಲ್ಲಿಸಿದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲವು ವಾರಗಳಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದ ಉಪ ಸಭಾಧ್ಯಕ್ಷ ಆನಂದ ಮಾಮನಿ(56) ಅವರು ಭಾನುವಾರ(ಅ.23) ನಿಧನರಾಗಿದ್ದರು.

ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿ ಮಾಮನಿಯವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.
ಬೆಂಗಳೂರಿನಿಂದ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಂತಿಮ ದರ್ಶನವನ್ನು ಪಡೆದುಕೊಂಡು, ಸರ್ಕಾರದ ಪರವಾಗಿ ಅಂತಿಮ ನಮನ ಸಲ್ಲಿಸಿದರು.
ಇದಕ್ಕೂ ಮುಂಚೆ ಮಾಮನಿಯವರ ತಾಯಿ ಗಂಗಮ್ಮ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನವನ್ನು ಹೇಳಿದರು.

ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ, ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ ಮತ್ತಿತರರು ಪಾರ್ಥೀವ ಶರೀರಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.


Spread the love

About Laxminews 24x7

Check Also

ಸೌಕರ್ಯ, ಸಿಬ್ಬಂದಿ: ಕೊರತೆ ಆಸ್ಪತ್ರೆಗೇ ಬೇಕಿದೆ ಚಿಕಿತ್ಸೆ!

Spread the love ಚಿಕ್ಕೋಡಿ: ಪಟ್ಟಣದ ಹೊರವಲಯದಲ್ಲಿ ₹20 ಕೋಟಿ ವೆಚ್ಚದಲ್ಲಿ ಐದು ಎಕರೆಯಲ್ಲಿ ತಲೆ ಎತ್ತಿರುವ ತಾಯಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ