Breaking News

ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ

Spread the love

ಚಿತ್ರದುರ್ಗ : ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ನಿವೇಶನದ ಸಮಸ್ಯೆ ಹಿನ್ನೆಲೆ‌ ಸಹಾಯ ಮಾಡುವ ನೆಪದಲ್ಲಿ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೋದರ ಮಾವನ ಮಗನಾದ ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧವೇ ಯುವತಿ ಠಾಣೆಯಲ್ಲಿ ದೂರು ನೀಡಿದ್ದಾರೆ,

ಘಟನೆ ವಿವರ : ದೂರುದಾರ ಯುವತಿಗೆ ಉಮೇಶ್ ಸೋದರ ಮಾವನ ಮಗನಾಗಬೇಕು, ಉಮೇಶ್ ಕಳೆದ ಐದು ವರ್ಷದ ಹಿಂದೆ ದಾವಣಗೆರೆಯಲ್ಲಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು ಆ ವೇಳೆ ನಿವೇಶನದ ಸಮಸ್ಯೆ ಬಗ್ಗೆ ಉಮೇಶ್ ಅವರಲ್ಲಿ ಯುವತಿ ಸಹಾಯ ಕೇಳಿದ್ದಳು ಅದರಂತೆ ಇನ್ಸ್ ಪೆಕ್ಟರ್ ಉಮೇಶ್ ಸಹಾಯ ಮಾಡುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ, ಅಲ್ಲದೆ ತಾನು ಕರೆದಾಗ ಬರುವತೆಯೂ ಹೇಳಿದ್ದಾರೆ ಅದಾದ ಬಳಿಕ ಇನ್ನೊಮ್ಮೆ ಶಿವಮೊಗ್ಗಕ್ಕೆ ಬಂದು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾರೆ.

ಅಲ್ಲದೆ ಯುವತಿ ಶಿವಮೊಗ್ಗದಲ್ಲಿ ಬಿಇಡಿ ಓದುತ್ತಿದ್ದಾಗ ಅತ್ಯಾಚಾರವೆಳಸಿದ್ದಾರೆ ಎನ್ನಲಾಗಿದ್ದು ಇದರಿಂದ ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ.

ಉಮೇಶ್ ಅವರಿಗೆ ಈಗಾಗಲೇ ಇಬ್ಬರು ಹೆಂದಿಯರಿದ್ದು ನನ್ನನ್ನು ಮೂರನೆಯವಳಾಗಿರು ಎಂದು ಹೇಳಿಕೊಂಡಿದ್ದರು ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. 


Spread the love

About Laxminews 24x7

Check Also

ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ

Spread the loveಬೆಂಗಳೂರು: ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ. ಕೊನೆಯ ರೈಲು ಹೊರಡುವ ಸಮಯ ವಿಸ್ತರಣೆಯಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ