ಸ್ವಾಮೀಜಿ ಐದು ಪುಟದ ಡೆತ್ ನೋಟ್ ಬರೆದಿದ್ದಾರೆ, ಮೂರು ಪುಟ ಪೊಲೀಸರಿಗೂ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ. ಡೆತ್ನೋಟ್ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ. ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) ಮಠದಲ್ಲೇ ನೇಣಿಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ನೇಣಿಗೆ ಶರಣಾಗಿದ್ದಾರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದೀಗ ಸ್ವಾಮೀಜಿಯವರು ಡೆತ್ ನೋಟು ಬರೆದಿಟ್ಟಿರುವುದು, ಮರ್ಯಾದೆಗೆ ಅಂಜಿ ಆತ್ಮಹತ್ಯೆ ಎಂದು ಉಲ್ಲೇಖಿಸಿರುವುದು ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಕ್ಕಿದೆ. ಸ್ವಾಮೀಜಿ ವಿರುದ್ಧ ಹನಿಟ್ರ್ಯಾಪ್ ನಡೆದಿದ್ದು, ಡೆತ್ನೋಟ್ನಲ್ಲಿ ಸಂಚಿನ ಬಗ್ಗೆ ಕುಂಚಗಲ್ ಬಂಡೆಮಠದ ಬಸವಲಿಂಗಶ್ರೀ ಸ್ವಾಮೀಜಿ ಬರೆದಿದ್ದಾರೆ. ಕುಂಚಗಲ್ ಸ್ವಾಮೀಜಿ ಕೆಳಗಿಳಿಸಲು ನಡೆದಿತ್ತು ಮಾಸ್ಟರ್ ಪ್ಲಾನ್, ಮಾಸ್ಟರ್ ಪ್ಲಾನ್ ಹಿಂದೆ ಇರೋ ವ್ಯಕ್ತಿ ಮತ್ತೋರ್ವ ಸ್ವಾಮೀಜಿ.
ಮತ್ತೊಂದು ಮಠದ ಸ್ವಾಮೀಜಿ ತಂತ್ರಕ್ಕೆ ಬಲಿಯಾದೇ ಎಂದು ಡೆತ್ನೋಟ್ ನಲ್ಲಿ ಉಲ್ಲೇಖಿಸಲಾಗಿದೆಯಂತೆ.